ಸಿ.ಟಿ.ರವಿ ವಿರುದ್ಧ ಎಂ.ಲಕ್ಷ್ಮಣ್ ದೂರು

ಸಿ.ಟಿ.ರವಿ ವಿರುದ್ಧ ಜಾತಿ ನಿಂದನೆ ಆರೋಪ
ಸಿ.ಟಿ.ರವಿ ವಿರುದ್ಧ ಜಾತಿ ನಿಂದನೆ ಆರೋಪ
Published on
ಮೈಸೂರು: ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಜಾತಿ ನಿಂದನೆ ಆರೋಪದಡಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ದೂರು ನೀಡಿದ್ದಾರೆ.
ಕಳೆದ ಸೆ.30ರಂದು ರವಿ ಅವರು ಚಿಕ್ಕಮಂಗಳೂರು ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮೊಬೈಲ್ ಮೂಲಕ ಡೀನ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದು, ಈ ಮೂಲಕ ಜಾತಿ ನಿಂದನೆ ಮಾಡಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅವರು ಸಮಾಜದಲ್ಲಿ ಕೋಮು ಗಲಭೆ ಸೃಷ್ಟಿಸುವ ಹೇಳಿಕೆಯೊಂದಿಗೆ ಅಸ್ಪಶ್ಯ ಜಾತಿಗಳನ್ನು ನಿಂದಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಲಕ್ಷ್ಮಣ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕೃತವಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net