ಗಣರಾಜ್ಯೋತ್ಸವ ಅದ್ದೂರಿ ಆಚರಣೆಗೆ ತೀರ್ಮಾನ

ಹುಣಸೂರು ನಗರಸಭೆ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ತಹಸೀಲ್ದಾರ್ ಜೆ.ಮಂಜುನಾಥ್ ಮಾತನಾಡಿದರು. ಪೌರಾಯುಕ್ತೆ ಕೆ.ಮಾನಸ ಇದ್ದಾರೆ.
ಹುಣಸೂರು ನಗರಸಭೆ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ತಹಸೀಲ್ದಾರ್ ಜೆ.ಮಂಜುನಾಥ್ ಮಾತನಾಡಿದರು. ಪೌರಾಯುಕ್ತೆ ಕೆ.ಮಾನಸ ಇದ್ದಾರೆ.
Published on
ಹುಣಸೂರು: ಜ.26ರಂದು ನಡೆಯಲಿರುವ 77ನೇ ಗಣರಾಜ್ಯೋತ್ಸವ ಸಮಾರಂಭವನ್ನು ಅದ್ದೂರಿಯಾಗಿ ಆಚರಿಸಲು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಸಭೆಯಲ್ಲಿ ನಿರ್ಣಯಿಸಲಾಯಿತು.
ಮಂಗಳವಾರ ನಗರಸಭೆಯ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಹಸೀಲ್ದಾರ್ ಜೆ.ಮಂಜುನಾಥ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಯಿತು.
ಈ ವೇಳೆ ಮಾತನಾಡಿದ ತಹಸೀಲ್ದಾರ್ ಜೆ.ಮಂಜುನಾಥ್, ಅಂದು ಬೆಳಗ್ಗೆ 9 ಗಂಟೆಗೆ ನಗರದ ಮುನೇಶ್ವರಕಾವಲ್ ಮೈದಾನದಲ್ಲಿ ಧ್ವಜಾರೋಹಣವನ್ನು ಉಪವಿಭಾಗಾಧಿಕಾರಿ ನೆರವೇರಿಸಲಿದ್ದು, ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಜಿ.ಡಿ.ಹರೀಶ್‌ಗೌಡ ವಹಿಸಲಿದ್ದಾರೆ. ವಿವಿಧ ಶಾಲಾ ಮಕ್ಕಳಿಂದ ಪಥಸಂಚಲನ, ದೇಶಭಕ್ತಿಗೀತೆಗಳಿಗೆ ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕೃಷಿ ಇನ್ನಿತರ ಕ್ಷೇತ್ರಗಳಲ್ಲಿ ಸಾಧನಗೈದವರಿಗೆ ಸನ್ಮಾನಿಸಲಾಗುವುದು ಎಂದರು.
ಅಂದು ಸಂಜೆ ಮೈದಾನದಲ್ಲಿ ವಿವಿಧ ಶಾಲೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಅಯೋಜಿಸಲಾಗಿದೆ. ಅಲ್ಲದೆ ಪಥಸಂಚಲನ, ನೃತ್ಯ ಮತ್ತು ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಕಾರ್ಯಕ್ರಮದ ಯಶಸ್ಸಿಗಾಗಿ ವಿವಿಧ ಇಲಾಖೆಗಳಿಗೆ ವಿವಿಧ ಜವಾಬ್ದಾರಿಗಳನ್ನು ನೀಡಿದ್ದು, ಎಲ್ಲರೂ ಅಚ್ಚುಕಟ್ಟಾಗಿ ಜವಾಬ್ದಾರಿ ನಿರ್ವಹಿಸಬೇಕೆಂದು ಸೂಚಿಸಿದರು.
ಸಭೆಯಲ್ಲಿ ಪೌರಾಯುಕ್ತೆ ಕೆ.ಮಾನಸ, ಮುಖಂಡರಾದ ನಿಂಗರಾಜ ಮಲ್ಲಾಡಿ, ಬಲ್ಲೇನಹಳ್ಳಿ ಕೆಂಪರಾಜು, ಕಿರಂಗೂರು ಸ್ವಾಮಿ, ಸಮಿತಿ ಸದಸ್ಯರಾದ ಎಸ್.ಜಯರಾಂ, ಪಿ.ಆರ್.ರಾಚಪ್ಪ, ಶಿರಸ್ತೇದಾರ್ ಶ್ರೀಪಾದ್ ನಲವತ್‌ವಾಡಕರ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net