ಕೈಗಾರಿಕೆ ಸ್ಥಾಪನೆಗೆ ವಿಳಂಬ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರದಿಂದ ಯೋಜನೆಗಳಿಗೆ ಅನುಮತಿ ಕೊಡಿಸಲು ಎಚ್.ಡಿ.ಕುಮಾರಸ್ವಾಮಿ ವಿಫಲರಾಗಿದ್ದಾರೆ ಎಂದು ಆರೋಪಿ ಕಾಂಗ್ರೆಸ್‌ನಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ರಾಜೇಶ್, ಕುಮಾರ್, ಶ್ರೀಕಂಠ, ಮಹೇಶ್, ಸುರೇಶ್ ಇತರರು ಇದ್ದರು.
ಕೇಂದ್ರದಿಂದ ಯೋಜನೆಗಳಿಗೆ ಅನುಮತಿ ಕೊಡಿಸಲು ಎಚ್.ಡಿ.ಕುಮಾರಸ್ವಾಮಿ ವಿಫಲರಾಗಿದ್ದಾರೆ ಎಂದು ಆರೋಪಿ ಕಾಂಗ್ರೆಸ್‌ನಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ರಾಜೇಶ್, ಕುಮಾರ್, ಶ್ರೀಕಂಠ, ಮಹೇಶ್, ಸುರೇಶ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲು ಎಚ್.ಡಿ.ಕುಮಾರಸ್ವಾಮಿ ಅವರು ವಿಫಲರಾಗಿದ್ದಾರೆ
  • ಮಂಡ್ಯದ್ಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ಗುರುತಿಸಿದ್ದರೂ ಮೌನವಹಿಸಿದ್ದಾರೆ
ಮೈಸೂರು:ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ 100 ಎಕರೆ ಜಮೀನು ಗುರುತಿಸಿದ್ದರೂ ಕೈಗಾರಿಕೆ ಸ್ಥಾಪನೆ ಮಾಡಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ನಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಆರ್‌ಟಿಒ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲು ಎಚ್.ಡಿ.ಕುಮಾರಸ್ವಾಮಿ ಅವರು ವಿಫಲರಾಗಿದ್ದಾರೆ. ಸಿದ್ದರಾಮಯ್ಯ ಬಜೆಟ್‌ನಲ್ಲಿ 100 ಎಕರೆ ಘೋಷಷಿ, ವಿ.ಸಿ.ಫಾರ್ಮ್ ಹಾಗೂ ಅಮರಾವತಿ ಹೋಟೆಲ್ ಮುಂಭಾಗ ಕೈಗಾರಿಕೆ ಸ್ಥಾಪನೆಗೆ ಜಾಗ ಗುರುತಿಸಿದ್ದರೂ ಮೌನವಹಿಸಿದ್ದಾರೆ ಎಂದರು.
ಕನಕಪುರ, ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆಯನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಂಡಿದೆ. ಈ ಯೋಜನೆಗೆ ಕೇಂದ್ರದಿಂದ ಅನುಮತಿ ಕೊಡಿಸಲು ವಿಫಲರಾಗಿದ್ದಾರೆ ಎಂದು ದೂರಿದರು.
ಕಾಂಗ್ರೆಸ್ ಮುಖಂಡರಾದ ರಾಜೇಶ್, ಕುಮಾರ್, ಶ್ರೀಕಂಠ, ಮಹೇಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net