ಉನ್ನತ ಹುದ್ದೆ ಪಡೆಯಲು ನಿರಂತರವಾಗಿ ಪ್ರಯತ್ನಿಸಿ

ಕೆ.ಆರ್.ನಗರದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಸಮನ್ವಯ ಸಮಿತಿ ವತಿಯಿಂದ ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕುಗಳ ಸರ್ಕಾರಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಶ್ರೀ ಬಸವನಾಗಿ ದೇವ ಸ್ವಾಮಿಜಿ, ಎಂ.ತಮ್ಮಣ, ಎಸ್.ರವಿ, ಎಂ.ಜೆ.ರಾಜಶೇಖರ್ ಇದ್ದರು.
ಕೆ.ಆರ್.ನಗರದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಸಮನ್ವಯ ಸಮಿತಿ ವತಿಯಿಂದ ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕುಗಳ ಸರ್ಕಾರಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಶ್ರೀ ಬಸವನಾಗಿ ದೇವ ಸ್ವಾಮಿಜಿ, ಎಂ.ತಮ್ಮಣ, ಎಸ್.ರವಿ, ಎಂ.ಜೆ.ರಾಜಶೇಖರ್ ಇದ್ದರು.
Published on
ಕೆ.ಆರ್.ನಗರ: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅಂಕ ಗಳಿಸಿದ ಮಾತ್ರಕ್ಕೆ ವಿದ್ಯಾರ್ಥಿಗಳು ತೃಪ್ತರಾಗಬೇಡಿ. ಉನ್ನತ ಹುದ್ದೆ ಪಡೆಯುವವರೆಗೂ ನಿರಂತರವಾಗಿ ಪ್ರಯತ್ನ ಮಾಡಬೇಕು ಎಂದು ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಎಸ್.ರವಿ ಹೇಳಿದರು.
ಪಟ್ಟಣದಲ್ಲಿ ಹತ್ತಿಗೋಡು ಸಣ್ಣಗೌರಮ್ಮ ಸಿದ್ದಪ್ಪ ಪಂಕ್ಷನ್ ಹಾಲ್‌ನಲ್ಲಿ ಬುಧವಾರ ಬುದ್ಧ, ಬಸವ, ಅಂಬೇಡ್ಕರ್ ಸಮನ್ವಯ ಸಮಿತಿ ವತಿಯಿಂದ ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕುಗಳ ಸರ್ಕಾರಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಮಕ್ಕಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ಅವಧಿಯಲ್ಲಿ ಶ್ರಮವಹಿಸಿ ಐಎಎಸ್, ಐಪಿಎಸ್, ಕೆಎಎಸ್‌ನಂತಹ ಉನ್ನತ ಮಟ್ಟದ ಪರೀಕ್ಷೆಗಳನ್ನು ಎದುರಿಸಿ ನೌಕರಿ ಪಡೆಯಬೇಕು. ಆಗ ಮಾತ್ರ ಸಮಾಜಕ್ಕೆ ಒಳ್ಳೆಯ ಹೆಸರು ಬರಲಿದೆ. ಉನ್ನತ ಹುದ್ದೆಗೆ ಏರಿದ ನಂತರ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕೆಂದು ಸಲಹೆ ನೀಡಿದರು.
ಬುದ್ಧ, ಬಸವ, ಅಂಬೇಡ್ಕರ್ ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಮಾಡಲು ಶಿಕ್ಷಣದಿಂದ ಮಾತ್ರ ಸಾಧ್ಯ. ಇದನ್ನು ಎಲ್ಲರೂ ತಿಳಿದುಕೊಳ್ಳಬೇಕು. ಉನ್ನತ ಶಿಕ್ಷಣ ಪಡೆಯುವಂತಹ ಮಕ್ಕಳಿಗೆ ನಾನು ಕೂಡ ವೈಯಕ್ತಿಕವಾಗಿ ಆರ್ಥಿಕ ಸಹಕಾರ ನೀಡುತ್ತೇನೆ ಎಂದು ಭರವಸೆ ನೀಡಿದರು.
ದಲಿತ ಮುಖಂಡ ಹನಸೋಗೆ ನಾಗರಾಜು ಮಾತನಾಡಿ, ಸಂವಿಧಾನ ವಿರೋಧಿಗಳ ವಿರುದ್ಧ ಹೊರಾಟ ಮಾಡುವ ಮನೋಭಾವನೆ ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದರು.
ಚಿತ್ರದುರ್ಗದ ಛಲವಾದಿ ಮಹಾ ಸಂಸ್ಥಾನ ಗುರುಪೀಠದ ಶ್ರೀ ಬಸವನಾಗಿ ದೇವ ಸ್ವಾಮೀಜಿ ಆರ್ಶೀವಚನ ನೀಡಿದರು. ತಾಪಂ ಮಾಜಿ ಸದಸ್ಯ ಎಂ.ತಮ್ಮಣ್ಣ, ವಕೀಲ ಎ.ಆರ್.ಕಾಂತರಾಜು, ಎಸ್‌ಸಿ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿದ್ದಯ್ಯ, ಅನ್ವೇಷಣಾ ಸಹಕಾರ ಸಂಘದ ಅಧ್ಯಕ್ಷ ಕಾಳಾಜಿ, ಬುದ್ಧ, ಬಸವ, ಅಂಬೇಡ್ಕರ್ ಸಮನ್ವಯ ಸಮಿತಿ ಅಧ್ಯಕ್ಷ ಎಂ.ಜೆ.ರಾಜಶೇಖರ್, ಸಂಘದ ಪದಾಧಿಕಾರಿಗಳಾದ ಈ.ರಾಮಯ್ಯ, ಮಹಾಲಿಂಗಯ್ಯ, ಮಹದೇವ, ವೆಂಕಟೇಶ್, ಕೃಷ್ಣಯ್ಯ, ಅಮರನಾಥ್, ದೇವಯ್ಯ, ಟೌನ್ ಅಧ್ಯಕ್ಷ ವಿಜಯ್, ಅಶೋಕ, ಚಂದ್ರಪ್ಪ, ಸೀತಾರಾಮ, ಶ್ರೀನಿವಾಸ್, ಹೊನ್ನಪ್ಪ, ತಾಲೂಕು ಯುವ ಜೆಡಿಎಸ್ ಅಧ್ಯಕ್ಷ ಹಂಪಾಪುರ ಸುರೇಶ್ ಇನ್ನಿತರರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net