ರೇಷ್ಮೆ ಕಾರ್ಖಾನೆ ಆವರಣದಲ್ಲೇ ಕ್ರೀಡಾಂಗಣ ನಿರ್ಮಾಣ

ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ
ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ
Published on

ಪ್ರಮುಖ ಮುಖ್ಯಾಂಶಗಳು

  • ಕೆಎಸ್‌ಐಸಿ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ
  • ಸಿಎಂ ಪುತ್ರ, ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ
ತಿ.ನರಸೀಪುರ: ಪಟ್ಟಣದ ಕೆಎಸ್‌ಐಸಿ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಸಂಧರ್ಭದಲ್ಲೇ ಸಿಎಂ ಪುತ್ರ, ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ರೇಷ್ಮೆ ಕಾರ್ಖಾನೆ ಆವರಣದಲ್ಲೇ ಕ್ರೀಡಾಂಗಣ ಮಾಡುವುದಾಗಿ ಪುನರುಚ್ಚರಿಸಿದ್ದಾರೆ.
ಪಟ್ಟಣದ ಹಳೇ ತಿರುಮಕೂಡಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಹದ್ದುಬಸ್ತು ಮಾಡಿರುವ ಜಾಗದಲ್ಲೇ ಕ್ರೀಡಾಂಗಣ ನಿರ್ಮಿಸುತ್ತೇವೆ. ಆದರೆ ಯಾವುದೇ ಕಾರಣಕ್ಕೂ ಕಾರ್ಖಾನೆ ಮುಚ್ಚುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರತಿಭಾನ್ವಿತ ಕ್ರೀಡಾಪಟುಗಳು ಮುಂದೆ ಬರಲಿ ಎಂಬ ಉದ್ದೇಶದಿಂದ ಕ್ರೀಡಾಂಗಣ ನಿರ್ಮಾಣ ಮಾಡಲಾಗುತ್ತಿದೆ. ಕೆಎಸ್‌ಐಸಿ ಸರ್ಕಾರಿ ಸ್ವಾಮ್ಯದ ಸಂಸ್ಥೆ. ಇಲ್ಲಿ ಫ್ಯಾಕ್ಟರಿ ಇರುವುದರಿಂದ ನೂರಾರು ಜನರಿಗೆ ಕೆಲಸ ಸಿಕ್ಕಿದೆ. ಅಂತಹ ಫ್ಯಾಕ್ಟರಿ ಮುಚ್ಚಿ ನಾವೇ ನಮ್ಮ ಜನರಿಗೆ ಯಾಕೆ ತೊಂದರೆ ಕೊಡೋಣ? ಅಲ್ಲದೇ, ಫ್ಯಾಕ್ಟರಿ ಮುಚ್ಚುವುದರಿಂದ ನಮಗೇ ತೊಂದರೆ. ಹಾಗಾಗಿ, ಯಾವುದೇ ಕಾರಣಕ್ಕೂ ಫ್ಯಾಕ್ಟರಿ ಮುಚ್ಚುವುದಿಲ್ಲ ಎಂದು ತಿಳಿಸಿದರು.
ಈ ವಿಚಾರವಾಗಿ ಕೆಲವರು ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಕಾರ್ಮಿಕರು ಕೆಲವು ತಾಂತ್ರಿಕ ತೊಂದರೆ ತಿಳಿಸಿದ್ದಾರೆ. ಅಧಿಕಾರಿಗಳು ಎಲ್ಲ ಕಡೆ ಕ್ರೀಡಾಂಗಣಕ್ಕೆ ಸೂಕ್ತ ಜಾಗ ಹುಡುಕಿ ತಾಂತ್ರಿಕ ಆಂಶಗಳ ತಕರಾರನ್ನು ಗಮನದಲ್ಲಿಟ್ಟುಕೊಂಡು ಕೆಎಸ್‌ಐಸಿಯ 5 ಎಕರೆ ಪ್ರದೇಶದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸೂಕ್ತ ಎಂದು ವರದಿ ನೀಡಿದ್ದಾರೆ. ಹಾಗಾಗಿ ಇಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ್ದೇವೆ. ಆದಾಗ್ಯೂ ಸಂದೇಹಗಳಿದ್ದರೆ ನಮ್ಮ ಬಳಿ ಬಂದು ಚರ್ಚೆ ಮಾಡಲಿ. ಇರುವ ತಾಂತ್ರಿಕ ತೊಂದರೆಗಳನ್ನು ಬಗೆಹರಿಸಿ ಕಾರ್ಮಿಕರಿಗೆ ಮನದಟ್ಟು ಮಾಡಿ ಕ್ರೀಡಾಂಗಣ ನಿರ್ಮಾಣ ಮಾಡುತ್ತೇವೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net