ಮಣಿಪಾಲ್ ಜಂಕ್ಷನ್‌ನಲ್ಲಿ ಫ್ಲೈ ಓವರ್ ನಿರ್ಮಾಣ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಖ್ಯ ಕಾರ್ಯದರ್ಶಿ ಜತೆಗೆ ಯದುವೀರ್ ಚರ್ಚೆ

ನವದೆಹಲಿಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ನವದೆಹಲಿಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
Published on
ಮೈಸೂರು: ನಗರದ ವರ್ತುಲ ರಸ್ತೆಯ ಮಣಿಪಾಲ್ ಜಂಕ್ಷನ್ ಬಳಿಯಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬುಧವಾರ ನವದೆಹಲಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮಣಿಪಾಲ್ ಜಂಕ್ಷನ್‌ನಲ್ಲಿ ಪ್ರತಿನಿತ್ಯ ಸಂಚಾರ ದಟ್ಟಣೆ ಕಂಡು ಬರುತ್ತಿದ್ದು, ಸಂಚಾರ ದಟ್ಟಣೆ ನಿಯಂತ್ರಿಸಲು ಫ್ಲೈಓವರ್ ನಿರ್ಮಾಣದ ಅವಶ್ಯಕತೆ ಇದೆ. ಫ್ಲೈ ಓವರ್ ನಿರ್ಮಾಣಗೊಂಡರೆ ಸಂಚಾರ ದಟ್ಟಣೆ ಕಡಿಮೆಯಾಗುವುದು ಮಾತ್ರವಲ್ಲದೆ ಅಪಘಾತಗಳು ಕಡಿಮೆಯಾಗಲಿದ್ದು, ಪ್ರಯಾಣದ ಸಮಯ ಇಳಿಕೆಯಾಗಲಿದೆ. ಮೈಸೂರಿಗೆ ಆಗಮಿಸುವ ಮತ್ತು ನಿರ್ಗಮಿಸುವ ಹಾದಿ ಸುಗಮವಾಗಲಿದೆ ಎಂದು ಯದುವೀರ್ ತಿಳಿಸಿದರು. ಇದಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದೇ ಸಂದರ್ಭ ಮೈಸೂರು-ಕುಶಾಲನಗರ ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆಗಳನ್ನು ನಿರ್ಮಿಸುವ ಕುರಿತು ಚರ್ಚೆ ನಡೆಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net