ಗುರಿ ಸಾಧನೆಗೆ ನಿರಂತರ ಪ್ರಯತ್ನ ಅಗತ್ಯ: ಡಾ.ನಾಗರಾಜು ಸಲಹೆ
ತಾಂಡವಪುರದ ಮಹಾರಾಜ ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘ಆರಂಭ’ ಓರಿಯೆಂಟೇಷನ್ ಕಾರ್ಯಕ್ರಮದಲ್ಲಿ ಡಾ.ವೈ.ಟಿ.ಕೃಷ್ಣೇಗೌಡ, ಡಾ.ನಾಗರಾಜು, ಶ್ರೀಶಂಕರ್ ಉಪಾಧ್ಯಾಯ, ಡಾ.ಕೆ.ಎನ್.ರಂಜಿತ್ ಇತರರಿದ್ದರು.
ಗುರಿ ಸಾಧಿಸುವವರೆಗೆ ನಿರಂತರ ಪ್ರಯತ್ನ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು
ವಿದ್ಯಾರ್ಥಿಗಳು ಜ್ಞಾನ, ಮೌಲ್ಯ ಹಾಗೂ ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕು
ಮೈಸೂರು:ಮಹಾರಾಜ ತಾಂತ್ರಿಕ ಮಹಾವಿದ್ಯಾಲಯದ ತಾಂಡವಪುರ ಕ್ಯಾಂಪಸ್‌ನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ‘ಆರಂಭ’ ಓರಿಯೆಂಟೇಷನ್ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಹಾರಾಜ ತಾಂತ್ರಿಕ ಮಹಾವಿದ್ಯಾಲಯ ಕಾರ್ಯದರ್ಶಿ ಹಾಗೂ ಪ್ರಾಂಶುಪಾಲ ಡಾ.ವೈ.ಟಿ.ಕೃಷ್ಣೇಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಗುಣಮಟ್ಟದ ಶಿಕ್ಷಣ ಕುರಿತು ವಿವರಿಸಿದರು.
ಒಡೆಯರಹಳ್ಳಿ ಸುವರ್ಣಮುಖಿ ಸಂಸ್ಕೃತಿ ಧಾಮದ ಸಂಸ್ಥಾಪಕ ಅಧ್ಯಕ್ಷ ಡಾ.ನಾಗರಾಜು ಮಾತನಾಡಿ, ಗುರಿ ಸಾಧಿಸುವವರೆಗೆ ನಿರಂತರ ಪ್ರಯತ್ನ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು.
ಸಿಐಐ ಮೈಸೂರು ವಲಯ ಉತ್ಸವ್ ಅಗರ್ವಾಲ್ ಅವರು, ಕೈಗಾರಿಕಾ ಕ್ಷೇತ್ರದ ಬೆಳವಣಿಗೆ, ಉತ್ಪಾದನಾ ವಲಯ ಹಾಗೂ ವಿದ್ಯಾರ್ಥಿಗಳಿಗೆ ಲಭ್ಯವಿರುವ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು.
ಮಹಾರಾಜ ತಾಂತ್ರಿಕ ಮಹಾವಿದ್ಯಾಲಯದ ಉಪಾಧ್ಯಕ್ಷರಾದ ವಿಶ್ರಾಂತ ಕುಲಪತಿ ಡಾ.ಹೇಮಂತ್ ಕುಮಾರ್ ಮಾತನಾಡಿ, ಕುವೆಂಪು ಅವರ ವಿಶ್ವಮಾನವ ಪರಿಕಲ್ಪನೆಯನ್ನು ಉಲ್ಲೇಖಿಸಿ, ವಿದ್ಯಾರ್ಥಿಗಳು ಜ್ಞಾನ, ಮೌಲ್ಯ ಹಾಗೂ ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕು ಎಂದರು.
ಸಂಸ್ಥೆಯ ಜಂಟಿ ಕಾರ್ಯದರ್ಶಿ ಡಾ.ಎಚ್.ಕೆ.ಚೇತನ್, ಉಪಪ್ರಾಂಶುಪಾಲ ಶ್ರೀಶಂಕರ್ ಉಪಾಧ್ಯಾಯ, ಪ್ರಾಧ್ಯಾಪಕ ಡಾ.ಡಿ.ಎಸ್.ಗುರು, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ.ಕೆ.ಎನ್.ರಂಜಿತ್, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಸಿಬ್ಬಂದಿ ಇದ್ದರು.
ಮಹಾರಾಜ ತಾಂತ್ರಿಕ ಮಹಾವಿದ್ಯಾಲಯದ 10ನೇ ವರ್ಷದ ಲೋಗೋವನ್ನು ಡಿಜಿಟಲ್ ಮೂಲಕ ಅನಾವರಣಗೊಳಿಸಲಾಯಿತು. ಸಾಧಕರ ಸಾಧನೆಗಳನ್ನು ಗುರುತಿಸಿ ಪ್ರಶಸ್ತಿ ಹಾಗೂ ಪುರಸ್ಕಾರಗಳನ್ನು ನೀಡಲಾಯಿತು.