

ಪ್ರಮುಖ ಮುಖ್ಯಾಂಶಗಳು
ಮೈಸೂರು:
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (ಎಂಎಂಸಿಆರ್‌ಐ) ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಬಾಕಿ ಇರುವ ಮೂರು ತಿಂಗಳ ವೇತನ ಪಾವತಿಸಬೇಕು, ಸ್ವಯಂಘೋಷಿತ ಮೇಲ್ವಿಚಾರಕರ ಹೆಸರಿನಲ್ಲಿ ಕಾರ್ಮಿಕರಿಗೆ ಕೊಡುತ್ತಿರುವ ಕಿರುಕುಳವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆ ಎಐಯುಟಿಯುಸಿಗೆ ಸಂಯೋಜಿತವಾಗಿರುವ ಎಂಎಂಸಿ ಮತ್ತು ಆರ್‌ಐ ಯುನೈಟೆಡ್ ಕಾಂಟ್ರಾಕ್ಟ್ ವರ್ಕರ್ಸ್ ಯೂನಿಯನ್ ವತಿಯಿಂದ ಪ್ರತಿಭಟನೆ ನಡೆಯಿತು.
ಜಮಾವಣೆಗೊಂಡ ಪ್ರತಿಭಟನಾಕಾರರು, ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.