ಎಚ್.ಡಿ.ಕೋಟೆ ತಾಲೂಕಿನ ತುಂಬಸೋಗೆ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಗ್ರಾಮದ ಸಂಜೀವಿನಿ ಮಹಿಳಾ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ 100 ದಿನದ ಕ್ಷಯ ರೋಗ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ ತರಬೇತಿ ಕಾರ್ಯಾಗಾರವನ್ನು ಡಾ.ಟಿ.ರವಿಕುಮಾರ್ ಉದ್ಘಾಟಿಸಿ ಮಾತನಾಡಿದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
health protection of girls
ಎಚ್.ಡಿ.ಕೋಟೆ: ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್‌ಪಿವಿ) ಸೋಂಕಿನಿಂದ ಗರ್ಭಕಂಠದ ಕ್ಯಾನ್ಸರ್ ಉಂಟಾಗುತ್ತದೆ. ಹೀಗಾಗಿ ಎಚ್‌ಪಿವಿ ಲಸಿಕೆ ಹಾಕಿಸುವ ಮೂಲಕ ಹೆಣ್ಣು ಮಕ್ಕಳ ಆರೋಗ್ಯ ರಕ್ಷಿಸುವ ನಿಟ್ಟಿನಲ್ಲಿ ಪಾಲಕರು ಸಹಕರಿಸಿ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ.ಟಿ.ರವಿಕುಮಾರ್ ತಿಳಿಸಿದರು.
ತಾಲೂಕಿನ ತುಂಬಸೋಗೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆರೋಗ್ಯ ಇಲಾಖೆ ವತಿಯಿಂದ ಗ್ರಾಮದ ಸಂಜೀವಿನಿ ಮಹಿಳಾ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ 100 ದಿನಗಳ ಕ್ಷಯ ರೋಗ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ ಜರುಗಿದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಮಾರ್ಗಸೂಚಿ ಅನುಸಾರ ಎಚ್‌ಪಿವಿ ಲಸಿಕೆಯನ್ನು 14 ವರ್ಷ ತುಂಬಿದ 15 ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ಉಚಿತವಾಗಿ ನೀಡಲಾಗುತ್ತಿದೆ. ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ವೈದ್ಯರ ಮೂಲಕ ಪಡೆದುಕೊಳ್ಳಬೇಕು. ಯೂ-ವಿನ್ ತಂತ್ರಾಂಶದಲ್ಲಿ ನೋಂದಣಿ ಮಾಡಿ ಆ ಮೂಲಕ ಲಸಿಕೆ ಪಡೆದವರಿಗೆ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ ಎಂದರು.
ಅರ್ಹ ಹೆಣ್ಣು ಮಗುವಿಗೆ ಲಸಿಕೆ ಹಾಕಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಾರ್ಯಪ್ರವೃತವಾಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಕ್ಷಯರೋಗ ಕಾರ್ಯಕ್ರಮದ ಮೇಲ್ವಿಚಾರಕ ನಾಗರಾಜು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶರಣಪ್ಪ ರಮಾಣಿ, ರವಿರಾಜ್, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಅಶೀಮಾ ಸುಲ್ತಾನ್, ಬಿಪಿಎಂಒ ಅರ್ಚನಾ, ಆಶಾ ಮೆಂಟರ್ ರೇಖಾ, ಪಿಡಿಒ ರವಿ ಸಂಜೀವಿನಿ ಸಂಘದ ಅಧಿಕಾರಿಗಳು ಇದ್ದರು.