ಹುಲಿ ದಾಳಿಗೆ ಹಸು, ರೈತ ಪಾರು

ಸರಗೂರು ತಾಲೂಕಿನ ಕೊತ್ತೇಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯನಗರ ಗ್ರಾಮದಲ್ಲಿ ಸೋಮವಾರ ಹುಲಿ ದಾಳಿಗೆ ಹಸು ಗಾಯಗೊಂಡಿದ್ದು,
ಸರಗೂರು ತಾಲೂಕಿನ ಕೊತ್ತೇಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯನಗರ ಗ್ರಾಮದಲ್ಲಿ ಸೋಮವಾರ ಹುಲಿ ದಾಳಿಗೆ ಹಸು ಗಾಯಗೊಂಡಿದ್ದು,
Published on

ಸರಗೂರು: ತಾಲೂಕಿನ ಕೊತ್ತೇಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯನಗರ ಗ್ರಾಮದಲ್ಲಿ ಸೋಮವಾರ ಹುಲಿ ದಾಳಿಗೆ ಹಸು ಗಾಯಗೊಂಡಿದ್ದು, ರೈತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರೈತ ಪುನೀತ್ ಅವರು ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಹುಲಿ ದಾಳಿ ನಡೆಸಿದೆ. ಘಟನೆಯಿಂದ ಜಯನಗರ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಹುಲಿ ಸಂಚಾರದ ಬಗ್ಗೆ ಆತಂಕವಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ. ಅರಣ್ಯ ಅಧಿಕಾರಿಗಳ ಬೇಜವಾಬ್ದಾರಿಯಿಂದ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆಹಿಡಿಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಅನಾಹುತ ಸಂಭವಿಸುವ ಸಾಧ್ಯತೆಯಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net