ಮಕ್ಕಳಲ್ಲಿ ಸ್ವಾತಂತ್ರ್ಯ ಯೋಧರ ಅರಿವು ಮೂಡಿಸಿ: ಶಾಸಕ ಟಿ.ಎಸ್.ಶ್ರೀವತ್ಸ

ಉತ್ತಿಷ್ಠ ಭಾರತ ಪ್ರತಿಷ್ಠಾನ ಹಾಗೂ ಯುವ ಪ್ರತಿಷ್ಠಾನದಿಂದ ನಗರದಲ್ಲಿ ಆಯೋಜಿಸಿದ್ದ ಚಿತ್ರರಚನಾ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮಡ್ಡೀಕೆರೆ ಗೋಪಾಲ್,  ಕೆ.ರಘುರಾಮ್ ವಾಜಪೇಯಿ, ಎಂ.ವಿ.ನಾಗೇಂದ್ರ ಬಾಬು, ಎಸ್.ಕೃಷ್ಣಮೂರ್ತಿ, ಎನ್.ಅನಂತು, ಎ. ಹರ್ಷವರ್ಧನ, ಸುಚಿಂದ್ರ ಇತರರು ಇದ್ದರು.
ಉತ್ತಿಷ್ಠ ಭಾರತ ಪ್ರತಿಷ್ಠಾನ ಹಾಗೂ ಯುವ ಪ್ರತಿಷ್ಠಾನದಿಂದ ನಗರದಲ್ಲಿ ಆಯೋಜಿಸಿದ್ದ ಚಿತ್ರರಚನಾ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮಡ್ಡೀಕೆರೆ ಗೋಪಾಲ್, ಕೆ.ರಘುರಾಮ್ ವಾಜಪೇಯಿ, ಎಂ.ವಿ.ನಾಗೇಂದ್ರ ಬಾಬು, ಎಸ್.ಕೃಷ್ಣಮೂರ್ತಿ, ಎನ್.ಅನಂತು, ಎ. ಹರ್ಷವರ್ಧನ, ಸುಚಿಂದ್ರ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸ್ವಾತಂತ್ರ್ಯ ಯೋಧರ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು
  • ದೇಶದ ಇತಿಹಾಸ ಕಲೆಯಲ್ಲಿ ರೂಪುಗೊಳಿಸುವ ಕೌಶಲ ವೃದ್ಧಿಸುವ ಪ್ರಯತ್ನ ಇದಾಗಿದೆ

ಮೈಸೂರು:

ದೇಶಕ್ಕೆ ಪ್ರಾಣವನ್ನೇ ಬಲಿಕೊಟ್ಟು ಹೋರಾಟ ಮಾಡಿದ ಸ್ವಾತಂತ್ರ್ಯ ಯೋಧರ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.

ಉತ್ತಿಷ್ಠ ಭಾರತ ಪ್ರತಿಷ್ಠಾನ ಹಾಗೂ ಯುವ ಪ್ರತಿಷ್ಠಾನದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜೆಎಲ್‌ಬಿ ರಸ್ತೆಯಲ್ಲಿರುವ ಶಿವಾನಂದ ಜ್ಞಾನಾಲಯದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ಯೋಧರ ಚಿತ್ರ ರಚನಾ ಸ್ಪರ್ಧೆಗೆ ಚಾಲನೆ ನೀಡಿ, ಮಕ್ಕಳೊಂದಿಗೆ ಸಂವಾದ ನಡೆಸಿ ಮಾತನಾಡಿದರು.
ಮಹಾನ್ ವ್ಯಕ್ತಿಗಳ ಚಿತ್ರವನ್ನು ಬಿಡಿಸಲು ಬಂದಿರುವ ಮಕ್ಕಳು ಸೇರಿದಂತೆ ಎಲ್ಲ ಮಕ್ಕಳಲ್ಲಿಯೂ ದೇಶ ಪ್ರೇಮವನ್ನು ಬಿತ್ತುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಅತ್ಯುತ್ತಮ ಕಾರ್ಯಕ್ರಮವನ್ನು ಆಚರಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಖ್ಯಾತ ವ್ಯಂಗ್ಯಚಿತ್ರಕಾರ ಹಾಗೂ ಉತ್ತಿಷ್ಠ ಭಾರತ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಎಂ.ವಿ.ನಾಗೇಂದ್ರ ಬಾಬು ಮಾತನಾಡಿ, ಮಕ್ಕಳಲ್ಲಿ ದೇಶಪ್ರೇಮ ಬೆಳೆಸುವ ನಿಟ್ಟಿನಲ್ಲಿ ಈ ಚಿತ್ರ ಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ದೇಶದ ಇತಿಹಾಸ ಕಲೆಯಲ್ಲಿ ರೂಪುಗೊಳಿಸುವ ಕೌಶಲ ವೃದ್ಧಿಸುವ ಪ್ರಯತ್ನ ಇದಾಗಿದೆ ಎಂದರು.
ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ನಮ್ಮ ಪೂರ್ವಿಕರು ತಮ್ಮ ಆಸ್ತಿ, ಹಣ, ಮನೆ, ಕುಟುಂಬ ಹಾಗೂ ಜೀವನವನ್ನೇ ತ್ಯಾಗ ಮಾಡಿದ್ದಾರೆ. ಮಹಾತ್ಮ ಗಾಂಧೀಜಿ ಸೇರಿದಂತೆ ಅನೇಕ ಮಹನೀಯರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ್ದಾರೆ. ಅವರನ್ನು ಸ್ಮರಿಸುವ ಕಾರ್ಯ ಶ್ಲಾಘನೀಯ ಎಂದರು.
ಹಿರಿಯ ಸಮಾಜ ಸೇವಕ ಕೆ.ರಘುರಾಮ್ ವಾಜಪೇಯಿ ಮಾತನಾಡಿ, ಮಕ್ಕಳಲ್ಲಿ ದೇಶಭಕ್ತಿ, ರಾಷ್ಟ್ರಾಭಿಮಾನ ಹಾಗೂ ಸೃಜನಶೀಲತೆ ಬೆಳೆಸುವಲ್ಲಿ ಚಿತ್ರಕಲಾ ಸ್ಪರ್ಧೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಮಕ್ಕಳು ಪಠ್ಯ ಶಿಕ್ಷಣದ ಜತೆಗೆ ದೇಶದ ಇತಿಹಾಸ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ರಾಷ್ಟ್ರದ ಸಂಸ್ಕೃತಿಯನ್ನು ತಿಳಿದುಕೊಳ್ಳಬೇಕು ಎಂದರು.
ಬಹುಮಾನ ವಿಜೇತರು:
ಎರಡು ವಿಭಾಗದಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯ ಮೊದಲ ವಿಭಾಗದಲ್ಲಿ ಪುನರ್ ದತ್ತ (ಪ್ರಥಮ), ರಿಷಿಕಾ ನಂದೀಶ್ (ದ್ವಿತೀಯ) ಹಾಗೂ ರಕ್ಷಿತ್ (ತೃತೀಯ) ಬಹುಮಾನ ಪಡೆದರು. ಎರಡನೇ ವಿಭಾಗದಲ್ಲಿ ಎಸ್.ಸ್ಮಿತಾ (ಪ್ರಥಮ), ಕೆ.ಹೇಮಂತ್ (ದ್ವಿತೀಯ), ಬಿಂದು (ತೃತೀಯ) ಸ್ಥಾನ ಗಳಿಸಿದರು.
ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೃಷ್ಣಮೂರ್ತಿ, ಹಿಮಾಲಯ ಫೌಂಡೇಷನ್ ಅಧ್ಯಕ್ಷ ಎನ್.ಅನಂತು, ಯುವ ಪ್ರತಿಷ್ಠಾನದ ಸಂಸ್ಥಾಪಕ ಎ.ಹರ್ಷವರ್ಧನ, ಭುವನೇಶ್ವರಿ ಸೇವಾ ಟ್ರಸ್ಟ್ ಕಾರ್ಯದರ್ಶಿ ಸುಚಿಂದ್ರ, ಸುವರ್ಣ ಬೆಳಕು ಫೌಂಡೇಷನ್ ಅಧ್ಯಕ್ಷ ಮಹೇಶ್, ಯೋಗಾಚಾರ್ಯ ಡಾ.ಬಿ.ಪಿ.ಮೂರ್ತಿ, ಸಿ.ಸಿ.ವೀಣಾ, ರವೀಂದ್ರ, ಚಂದನ್‌ಕುಮಾರ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net