ಅಲೆಮಾರಿ, ಬುಡಕಟ್ಟು ಜನಾಂಗಕ್ಕೆ ಅರಿವು ಮೂಡಿಸಿ

ಪಟ್ಟಣದ ಸಾರ್ವಜನಿಕ ಬಸ್ ನಿಲ್ದಾಣದ ಆವರಣದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಹಾಗೂ ಸೌಮ್ಯ ಅನಿಲ್ ಚಿಕ್ಕಮಾದು ತಮ್ಮ ಮಗುವಿಗೆ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್, ಡಾ. ಪೂರ್ಣಿಮಾ ಇತರರು ಇದ್ದರು.
ಪಟ್ಟಣದ ಸಾರ್ವಜನಿಕ ಬಸ್ ನಿಲ್ದಾಣದ ಆವರಣದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಹಾಗೂ ಸೌಮ್ಯ ಅನಿಲ್ ಚಿಕ್ಕಮಾದು ತಮ್ಮ ಮಗುವಿಗೆ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್, ಡಾ. ಪೂರ್ಣಿಮಾ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶೇ. 100 ಗುರಿ ಸಾಧಿಸಲು ಶಾಸಕ ಅನಿಲ್ ಚಿಕ್ಕಮಾದು ಸೂಚನೆ
ಎಚ್.ಡಿ.ಕೋಟೆ : ಪಟ್ಟಣದ ಸಾರ್ವಜನಿಕ ಬಸ್ ನಿಲ್ದಾಣದ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ಅನಿಲ್ ಚಿಕ್ಕಮಾದು ಹಾಗೂ ಸೌಮ್ಯ ಅನಿಲ್ ಚಿಕ್ಕಮಾದು ತಮ್ಮ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ರಾಷ್ಟ್ರೀಯ ಪಲ್ಸ್ ಪೋಲಿಯೋ 1995 ರಲ್ಲಿ ಆರಂಭವಾಯಿತು. 0-5 ವರ್ಷದ ವರ್ಷದ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ತಾಲೂಕಿನಲ್ಲಿ ಅತಿ ಹೆಚ್ಚಾಗಿ ಅಲೆಮಾರಿ ಮತ್ತು ಬುಡಕಟ್ಟು ಜನಾಂಗದವರು ಇದ್ದು, ಅವರಿಗೆ ಅರಿವು ಮೂಡಿಸಿ ಶೇ.100 ರಷ್ಟು ಗುರಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಮಾತನಾಡಿ, ತಾಲೂಕಿನಲ್ಲಿ 5 ವರ್ಷದೊಳಗಿನ ಸುಮಾರು 18,684 ಮಕ್ಕಳಿದ್ದು, ಒಟ್ಟು 198 ಬೂತ್ ತೆರೆಯಲಾಗಿದೆ. 40 ಮೇಲ್ವಿಚಾರಕರ ನೇತೃತ್ವದಲ್ಲಿ ಒಟ್ಟು 804 ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಾರ್ವಜನಿಕ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ. ಪೂರ್ಣಿಮಾ, ರೋಟರಿ ಸಂಸ್ಥೆಯ ಅಧ್ಯಕ್ಷ ಎನ್.ಧರ್ಮೇಶ್, ಲಯನ್ ಭಾಸ್ಕರ್, ಉಮೇಶ್, ವೆಂಕಿ, ಶರಣಪ್ಪ, ರವಿರಾಜ್, ಅಶೋಕ್, ಅರಾಲಪ್ಪ, ಅಶೀಮಾ, ಅರ್ಚನಾ, ರೇಖಾ, ನಾಗಮ್ಮ, ಸುಷ್ಮಾ, ಅನುಪಮ ಇತರರು ಇದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net