ಪ್ರಜಾಪ್ರಭುತ್ವ ಉಳಿವಿಗೆ ಯುವಕರಿಗೆ ಜಾಗೃತಿ ಮೂಡಿಸಿ

 ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಡಾ. ಮುಖ್ಯಮಂತ್ರಿ ಚಂದ್ರು ಉದ್ಘಾಟಿಸಿದರು. ಪ್ರೊ.ಎಸ್.ಶಿವರಾಜಪ್ಪ, ಡಾ.ಎಂ.ಶಾರದಾ, ಎಲ್.ರಂಗಯ್ಯ, ತಗಡೂರು ವೀರೇಶ್ ಕುಮಾರ್, ಸತ್ಯಮೂರ್ತಿ, ಡಾ.ಜಿ.ಪ್ರಸಾದ್‌ಮೂರ್ತಿ, ಅಂಶಿ ಪ್ರಸನ್ನಕುಮಾರ್ ಇದ್ದರು.
ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಡಾ. ಮುಖ್ಯಮಂತ್ರಿ ಚಂದ್ರು ಉದ್ಘಾಟಿಸಿದರು. ಪ್ರೊ.ಎಸ್.ಶಿವರಾಜಪ್ಪ, ಡಾ.ಎಂ.ಶಾರದಾ, ಎಲ್.ರಂಗಯ್ಯ, ತಗಡೂರು ವೀರೇಶ್ ಕುಮಾರ್, ಸತ್ಯಮೂರ್ತಿ, ಡಾ.ಜಿ.ಪ್ರಸಾದ್‌ಮೂರ್ತಿ, ಅಂಶಿ ಪ್ರಸನ್ನಕುಮಾರ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಚಲನಚಿತ್ರ ನಟ ಡಾ.ಮುಖ್ಯಮಂತ್ರಿ ಚಂದ್ರು ಸಲಹೆ
  • ‘ಭವಿಷ್ಯದಲ್ಲಿ ಪ್ರಜಾಪ್ರಭುತ್ವ ರಕ್ಷಣೆ, ಜವಾಬ್ದಾರಿ ಯುವಶಕ್ತಿಯ ಕೈಯಲ್ಲಿ’ ಮುಕ್ತ ಸಂವಾದ
  • ಚುನಾವಣೆಯಲ್ಲಿ ಯೋಗ್ಯರನ್ನು ಆಯ್ಕೆ ಮಾಡುವ ಮೂಲಕ ಜವಾಬ್ದಾರಿ ಪ್ರದರ್ಶಿಸಬೇಕು.
  • ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಯುವಕರಿಗೆ ಜಾಗೃತಿ ಮೂಡಿಸುವ ಅನಿವಾರ್ಯತೆ ಇದೆ
ಮೈಸೂರು: ಪ್ರತಿಯೊಬ್ಬರೂ ಸಂವಿಧಾನದ ಮೂಲ ಆಶಯಗಳು ಮತ್ತು ಅದರಲ್ಲಿ ಅಡಕವಾಗಿರುವ ಅಂಶಗಳ ಬಗ್ಗೆ ಸರಳವಾಗಿ ತಿಳಿದುಕೊಳ್ಳಬೇಕು. ಅದರಂತೆ ನಡೆಯಬೇಕು ಎಂದು ಚಲನಚಿತ್ರ ನಟ ಡಾ.ಮುಖ್ಯಮಂತ್ರಿ ಚಂದ್ರು ಹೇಳಿದರು.
ದಾರಿ ಫೌಂಡೇಷನ್ ವತಿಯಿಂದ ನಗರದ ಶ್ರೀ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ‘ಭವಿಷ್ಯದಲ್ಲಿ ಪ್ರಜಾಪ್ರಭುತ್ವ ರಕ್ಷಣೆ, ಜವಾಬ್ದಾರಿ ಯುವಶಕ್ತಿಯ ಕೈಯಲ್ಲಿ’ ಮುಕ್ತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಗಾಂಧಿ, ಬಸವಣ್ಣ, ಅಂಬೇಡ್ಕರ್ ಆದರ್ಶವಾಗಬೇಕು. ಜ್ಞಾನ ಸಂಪಾದನೆಗೆ ಭಾಷೆ ಅಡ್ಡಿಯಾಗುವುದಿಲ್ಲ. ಆದ್ದರಿಂದ ಎಲ್ಲರೂ ಕೀಳರಿಮೆ ಬಿಟ್ಟು ಆತ್ಮವಿಶ್ವಾಸದಿಂದ ಓದಬೇಕು ಎಂದರು.
ಚುನಾವಣೆಯಲ್ಲಿ ಯೋಗ್ಯರನ್ನು ಆಯ್ಕೆ ಮಾಡುವ ಮೂಲಕ ಜವಾಬ್ದಾರಿ ಪ್ರದರ್ಶಿಸಬೇಕು. ನಾವು ಮದುವೆ ಮಾಡುವಾಗ ಹತ್ತಾರು ಬಾರಿ ಆಲೋಚಿಸುತ್ತೇವೆ. ಆದರೆ, ಇದೇ ಕಾಳಜಿಯನ್ನು ಮತದಾನದ ಸಂದರ್ಭದಲ್ಲಿ ತೋರಿಸುವುದಿಲ್ಲ. ಆದ್ದರಿಂದಲೇ ಇಂದು ಈ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಯುವಕರಿಗೆ ಜಾಗೃತಿ ಮೂಡಿಸುವ ಅನಿವಾರ್ಯತೆ ಇದೆ ಎಂದು ಹೇಳಿದರು.
ನಮ್ಮದು ಸಾರ್ವಭೌಮ, ಸಮಾಜವಾದಿ, ಧರ್ಮನಿರಪೇಕ್ಷ ಪ್ರಜಾಪ್ರಭುತ್ವ ರಾಷ್ಟ್ರ. ಇಲ್ಲಿ ಸರ್ವರಿಗೂ ಸಮಪಾಲು, ಸಮಬಾಳು ಸಿಗಬೇಕು. ಸಂವಿಧಾನವನ್ನು ತಿದ್ದುಪಡಿ ಮಾಡಬಹುದೇ ಹೊರತು ಬದಲಾಯಿಸಲು ಸಾಧ್ಯವೇ ಇಲ್ಲ. ಯಾರಾದರೂ ಬದಲಾವಣೆ ಮಾಡುತ್ತೇವೆ ಎಂದರೆ ಅದು ರಾಷ್ಟ್ರ ದ್ರೋಹದ ಕೆಲಸವಾಗುತ್ತದೆ ಎಂದರು.
ಶ್ರೀ ನಟರಾಜ ಪ್ರತಿಷ್ಠಾನದ ವಿಶೇಷಾಧಿಕಾರಿ ಪ್ರೊ.ಎಸ್.ಶಿವರಾಜಪ್ಪ ಮಾತನಾಡಿ, ಪ್ರಜಾಪ್ರಭುತ್ವ ರಕ್ಷಣೆಯಲ್ಲಿ ಯುವಕರ ಪಾತ್ರ ಪ್ರಸ್ತುತ ಮುಖ್ಯವಾಗಿದೆ ಎಂದರು.
ದಾರಿ ಫೌಂಡೇಷನ್ ಕಾರ್ಯದರ್ಶಿ ತಗಡೂರು ವೀರೇಶ್‌ಕುಮಾರ್ ಮಾತನಾಡಿ, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಯುವಕರ ಜಾಗೃತಿ ಕಾರ್ಯಕ್ರಮ ನಡೆಸಿ, ಪ್ರಬಂಧ ಸ್ಪರ್ಧೆ ಏರ್ಪಡಿಸಿರುವ ಉದ್ದೇಶವಿದೆ ಎಂದರು.
ಪ್ರಾಂಶುಪಾಲೆ ಡಾ.ಎಂ.ಶಾರದಾ, ಉಪಪ್ರಾಂಶುಪಾಲ ಡಾ.ಜಿ.ಪ್ರಸಾದ್ ಮೂರ್ತಿ, ಫೌಂಡೇಷನ್ ಅಧ್ಯಕ್ಷ ಎಲ್.ರಂಗಯ್ಯ, ಮಂಡ್ಯ ರೈತರ ಶಾಲೆಯ ಸಂಸ್ಥಾಪಕ ಸತ್ಯಮೂರ್ತಿ, ವಿಶ್ವನಾಥ್ ಕುಲಕರ್ಣಿ, ಪ್ರಭಾಕರ್, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಎನ್.ಆರ್.ಸಿಂಧು, ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪಿ.ರಮ್ಯಾ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಎಂ.ಎಸ್.ಸಂಧ್ಯಾರಾಣಿ, ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net