ಮಾದಕ ವಸ್ತುಗಳ ಮಾರಾಟ ತಡೆಗೆ ಜಾಗೃತಿ ಮೂಡಿಸಿ: ಎಎಸ್ ಪಿ ಸಿ.ಮಲ್ಲಿಕ್

ಸಿ.ಮಲ್ಲಿಕ್
ಸಿ.ಮಲ್ಲಿಕ್
Published on

ಪ್ರಮುಖ ಮುಖ್ಯಾಂಶಗಳು

  • ಹಾಸ್ಟೆಲ್, ಕಾಲೇಜುಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿ ವಿದ್ಯಾರ್ಥಿಗಳ ಕಾರ್ಯಚಟುವಟಿಕೆ ಗಮನಿಸಬೇಕು
  • ವಿದ್ಯಾರ್ಥಿಗಳು ಹೊರಗಿನಿಂದ ಪಾರ್ಸೆಲ್ ಮೂಲಕ ಖರೀದಿಸುವ ಪದಾರ್ಥಗಳ ಬಗ್ಗೆ ನಿಗಾ ವಹಿಸಿ
ಮೈಸೂರು:ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ತಡೆಗಟ್ಟಲು ಜಾಗೃತಿ ಕಾರ್ಯಕ್ರಮ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಮಲ್ಲಿಕ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೂನ್ 26 ರಂದು ಮಾದಕ ವಸ್ತು ವಿರೋಧಿ ದಿನಾಚರಣೆ ಆಚರಿಸಲಾಗುತ್ತಿದ್ದು, ಸದರಿ ಮಾಹೆಯಲ್ಲಿ ವಿವಿಧ ಇಲಾಖೆಯಿಂದ ಹೆಚ್ಚಾಗಿ ಕಾಲೇಜು ವಿದ್ಯಾರ್ಥಿಗಳನ್ನು ಅದಲ್ಲಿ ತೊಡಗಿಸಿಕೊಂಡು ಅರಿವು ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಮಾದಕ ವಸ್ತುಗಳ ಸೇವನೆ ಸಮಾಜಕ್ಕೆ ಮಾರಕ ಎನ್ನುವುದನ್ನು ಮನವರಿಕೆ ಮಾಡಬೇಕು ಎಂದು ಹೇಳಿದರು.
ಚೆಂಡು ಹೂ ಹಾಗೂ ತೊಗರಿ ಗಿಡಗಳ ಮಧ್ಯೆ ಗಂಜಾ ಗಿಡಗಳನ್ನು ಬೆಳೆಯುವ ಸಾಧ್ಯತೆ ಹೆಚ್ಚಿದ್ದು, ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅವರು ಸ್ಥಳ ಭೇಟಿ ಮಾಡಿದ ಸಂದರ್ಭದಲ್ಲಿ ಪರಿಶೀಲನೆ ನಡೆಸುವಂತೆ ತಿಳಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಬಹಳಷ್ಟು ಖಾಸಗಿ ವ್ಯಸನ ಮುಕ್ತ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಈ ಕೇಂದ್ರಗಳ ಕಾರ್ಯನಿರ್ವಹಣೆಗೆ ಇರುವ ಷರತ್ತುಗಳು ಹಾಗೂ ಅವುಗಳ ಪಾಲನೆಯ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು ಎಂದರು.
ಧೂಮಪಾನ ಮಾಡುವ ವ್ಯಕ್ತಿಯ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರೊಂದಿಗೆ ಅವರ ಜತೆ 5 ರಿಂದ 6 ಗಂಟೆ ಸಂಪರ್ಕದಲ್ಲಿ ಇರುವವರ ಮೇಲೂ ಪರಿಣಾಮ ಬೀರುತ್ತದೆ ಎನ್ನುವ ಎಚ್ಚರಿಕೆ ನೀಡಬೇಕು ಎಂದು ಹೇಳಿದರು.
ಹಾಸ್ಟೆಲ್, ಕಾಲೇಜುಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿ ವಿದ್ಯಾರ್ಥಿಗಳ ಕಾರ್ಯಚಟುವಟಿಕೆ ಹಾಗೂ ಅವರ ವರ್ತನೆಯ ಬದಲಾವಣೆಗಳು ಹಾಗೂ ವಿದ್ಯಾರ್ಥಿಗಳು ಹೊರಗಿನಿಂದ ಪಾರ್ಸೆಲ್ ಮೂಲಕ ಖರೀದಿಸುವ ಆಹಾರ ಪದಾರ್ಥಗಳ ಬಗ್ಗೆ ನಿಗಾ ವಹಿಸಿ ಎಂದರು.
ಮೇ 31 ರಂದು ತಂಬಾಕು ಮುಕ್ತ ದಿನಾಚರಣೆ ಕಾರ್ಯಕ್ರಮವಿದ್ದು, ಈ ಬಾರಿ ವಿನೂತನವಾಗಿ ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕಿದೆ. ಇದಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.
ಆರೋಗ್ಯ ಇಲಾಖೆಯ ಕೋಟ್ಪಾ ವಿಭಾಗದಿಂದ ಏಪ್ರಿಲ್ ಮಾಹೆಯಲ್ಲಿ 561 ದೂರು ದಾಖಲಿಸಿ 1,25,000 ರೂ. ದಂಡ ಸಂಗ್ರಹಿಸಲಾಗಿದೆ. ಅಬಕಾರಿ ಇಲಾಖೆಯಿಂದ ಮೈಸೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 20 ಎನ್.ಡಿ.ಪಿ.ಎಸ್ ಪ್ರಕರಣಗಳನ್ನು ದಾಖಲಿಸಿ 14 ಆರೋಪಿಗಳನ್ನು ಬಂಧಿಸಿ, 58.335 ಕೆ.ಜಿ. ಗಾಂಜಾ ಹಾಗೂ 50 ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಮೈಸೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಎಸಿಪಿ ಮನೋಜ್‌ಕುಮಾರ್, ಸಹಾಯಕ ಔಷಧ ನಿಯಂತ್ರಕರಾದ ಆಶಾಲತಾ, ವಾಸೀಂ ಷರೀಫ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲಾ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net