ಪೂರ್ವ ಮುಂಗಾರು ಬೆಳೆ ಸಮೀಕ್ಷೆಯನ್ನು 30 ದಿನಗಳೊಳಗಾಗಿ ಕಡ್ಡಾಯವಾಗಿ ಮುಗಿಸಬೇಕಾಗಿದೆ. ಜಿಲ್ಲೆಯಲ್ಲಿ ಒಟ್ಟು 9,96,708 ಪ್ಲಾಟ್‌ಗಳಿದ್ದು, ಸಮೀಕ್ಷೆ ನಡೆಸಬೇಕಾಗಿದೆ. ಜಿಲ್ಲೆಯ ಒಟ್ಟು 1,301 ಗ್ರಾಮಗಳಲ್ಲಿ ಈ ಸಮೀಕ್ಷೆ ನಡೆಯಲಿದ್ದು, ಇದಕ್ಕಾಗಿ 1009 ಖಾಸಗಿ ನಿವಾಸಿಗಳು (ಪ್ರೈವೇಟ್ ರೆಸಿಡೆನ್ಸಿ-ಪಿಆರ್)ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.