ವ್ಯಕ್ತಿತ್ವ ವಿಕಾಸಕ್ಕೆ ಸಾಂಸ್ಕೃತಿಕ ಚಟುವಟಿಕೆ ಅಗತ್ಯ: ಕಿರುತೆರೆ ನಟಿ ಡಾ.ಸ್ಪರ್ಶ ಶೆಣೈ ಅಭಿಮತ

ವಿಜಯವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಡಾ. ಸ್ಪರ್ಶ ಶೆಣೈ ಉದ್ಘಾಟಿಸಿದರು. ವಿಶ್ವನಾಥ, ಎಚ್. ಸತ್ಯಪ್ರಸಾದ್ ಇತರರು ಇದ್ದರು.
ವಿಜಯವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಡಾ. ಸ್ಪರ್ಶ ಶೆಣೈ ಉದ್ಘಾಟಿಸಿದರು. ವಿಶ್ವನಾಥ, ಎಚ್. ಸತ್ಯಪ್ರಸಾದ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಿಕ್ಷಣವೆಂದರೆ ಕೇವಲ ಪಠ್ಯ ಪುಸ್ತಕಗಳ ಜ್ಞಾನವಲ್ಲ. ನಮ್ಮ ಸಂಸ್ಕೃತಿ, ಪರಂಪರೆ, ಕಲೆ, ಸಾಹಿತ್ಯ, ಸಂಗೀತ, ನೃತ್ಯ ಮತ್ತು ನಾಟಕಗಳ ಪರಿಚಯವೂ ಆಗಬೇಕು
  • ಸಾಂಸ್ಕೃತಿಕ ಕಾರ್ಯಕ್ರಮದಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ, ಸೃಜನಶೀಲತೆ ಬೆಳೆಯುತ್ತದೆ
ಮೈಸೂರು:ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಸಾಂಸ್ಕೃತಿಕ ಚಟುವಟಿಕೆ ಅತ್ಯಗತ್ಯ ಎಂದು ಕಿರುತೆರೆ ನಟಿ ಡಾ.ಸ್ಪರ್ಶ ಶೆಣೈ ಅಭಿಪ್ರಾಯಪಟ್ಟರು.
ನಗರದ ವಿಜಯವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ವೇದಿಕೆಗೆ ಚಾಲನೆ ನೀಡಿ ಅವರು ಮಾತನಾಡಿ, ಶಿಕ್ಷಣವೆಂದರೆ ಕೇವಲ ಪಠ್ಯ ಪುಸ್ತಕಗಳ ಜ್ಞಾನವಲ್ಲ. ನಮ್ಮ ಸಂಸ್ಕೃತಿ, ಪರಂಪರೆ, ಕಲೆ, ಸಾಹಿತ್ಯ, ಸಂಗೀತ, ನೃತ್ಯ ಮತ್ತು ನಾಟಕಗಳ ಪರಿಚಯವೂ ಆಗಬೇಕು. ಸಮಗ್ರ ವ್ಯಕ್ತಿತ್ವ ವಿಕಾಸನ ಆಗಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ, ಸೃಜನಶೀಲತೆ ಮತ್ತು ಸಾಮಾಜಿಕ ಮೌಲ್ಯಗಳು ಬೆಳೆಯುತ್ತವೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಾಂಸ್ಕೃತಿಕ ವೇದಿಕೆಗಳು ಉತ್ತಮ ಅವಕಾಶ ಒದಗಿಸುತ್ತವೆ. ಈ ಅವಕಾಶಗಳನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಗೌರವ ಕಾರ್ಯದರ್ಶಿವಿಶ್ವನಾಥ ಮಾತನಾಡಿ, ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾದ ಡಾ.ಸ್ಪರ್ಶ ಶೆಣೈ ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದು, ಇದು ನಮ್ಮ ಸಂಸ್ಥೆಯೂ ಹೆಮ್ಮೆ. ನಮ್ಮಲ್ಲಿರುವ ಸುಪ್ತವಾದ ಪ್ರತಿಭೆಯನ್ನು ಅವಕಾಶ ಸಿಕ್ಕಾಗ ಪ್ರಕಾಶಗೊಳಿಸಿ ಉನ್ನತ ಮಟ್ಟದಲ್ಲಿ ಸಾಧನೆ ಮಾಡಲು ದೃಢ ಸಂಕಲ್ಪ ಮಾಡಬೇಕು. ನಮ್ಮ ಪ್ರತಿಭೆಯು ಅರಳುವಂತೆ ಮಾಡುವಲ್ಲಿ ಕಾರ್ಯತತ್ಪರರಾಗಬೇಕು ಎಂದು ಹೇಳಿದರು.
ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜ್ಞಾನ ಮತ್ತು ಕೌಶಲ ಪರಸ್ಪರ ಪೂರಕವಾಗಿದ್ದು, ವಿದ್ಯಾರ್ಥಿಗಳಿಗೆ ಇವೆರಡರ ಅಗತ್ಯತೆ ಇದೆ. ಸಂಸ್ಕೃತಿಯು ಒಬ್ಬ ವಿದ್ಯಾರ್ಥಿಯ ವ್ಯಕ್ತಿತ್ವವನ್ನು ರೂಪಿಸುತ್ತದೆ. ಆದ್ದರಿಂದ ವಿದ್ಯಾಭ್ಯಾಸದ ಜತೆಗೆ ಸಂಸ್ಕೃತಿಯನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದರು.
ಕಾಲೇಜಿನ ಪ್ರಾಂಶುಪಾಲ ಎಚ್. ಸತ್ಯಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿ, ವೇದಿಕೆಯ ಉದ್ದೇಶ, ಮಹತ್ವ ಮತ್ತು ಚಟುವಟಿಕೆ ವಿವರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net