ಮಹಾರಾಜ ಟ್ರೋಫಿ ಟಿ-20 ಕ್ರಿಕೆಟ್ ಟೂರ್ನಿ ಎಲ್ಲ ಪಂದ್ಯಗಳ ವೀಕ್ಷಣೆಗೆ ಅಭಿಮಾನಿಗಳಿಗೂ ಅವಕಾಶ ದೊರೆಯುವ ಸಾಧ್ಯತೆ ಇದೆ. ಐಪಿಎಲ್ 18ರ ಆವೃತ್ತಿಯ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಸಾವಿಗೀಡಾಗಿದ್ದರು. ಈ ಘಟನೆ ಬಳಿಕ ಬೆಂಗಳೂರಿನಲ್ಲಿ ಕ್ರಿಕೆಟ್ ಆಯೋಜನೆ, ದೊಡ್ಡ ಸಮಾರಂಭಗಳು, ರ‌್ಯಾಲಿಗಳಿಗೆ ಅನುಮತಿ ನೀಡಲು ನಗರ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕ್ರಮ ತೆಗೆದುಕೊಂಡಿದ್ದರು. ಹಾಗಾಗಿ, ಕಳೆದ ವರ್ಷ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಹಾರಾಜ ಟ್ರೋಫಿ ಕ್ರಿಕೆಟ್ ಆಯೋಜಿಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಅನುಮತಿ ನೀಡಿರಲಿಲ್ಲ. ಹೀಗಾಗಿ ಎಲ್ಲ ಪಂದ್ಯಗಳನ್ನು ಮೈಸೂರಿಗೆ ಸ್ಥಳಾಂತರಿಸಲಾಗಿತ್ತು. ಕಳೆದ ವರ್ಷ ಮಹಾರಾಜ ಟ್ರೋಫಿಯ 30 ಲೀಗ್, ಕ್ವಾಲಿಫೈಯರ್-1, ಎಲಿಮಿನೇಟರ್, ಕ್ವಾಲಿಫೈಯರ್-2, ಫೈನಲ್ ಸೇರಿದಂತೆ ಒಟ್ಟು 34 ಪಂದ್ಯಗಳು ಕ್ರಿಕೆಟ್ ಅಭಿಮಾನಿಗಳಿಲ್ಲದೆ ನಡೆದಿದ್ದವು. ಫ್ರ್ಯಾಂಚೈಸಿಗಳು, ಕೆಎಸ್‌ಸಿಎ ಪದಾಧಿಕಾರಿಗಳು, ಸದಸ್ಯರು ಮಾತ್ರ ಪಂದ್ಯಗಳನ್ನು ವೀಕ್ಷಣೆ ಮಾಡಿದ್ದರು.