ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕಡಬಮ್ಸ್ ಗ್ರೂಪ್‌ನ ನಿರ್ದೇಶಕರೂ ಆದ ಮನಃಶಾಸ್ತçಜ್ಞ ರಾಜಶೇಖರ್ ಹಿರೇಮಠ್ ಅವರು, ಸುತ್ತೂರು ವೀರಸಿಂಹಾಸನ ಮಠದ ಶ್ರೀ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಜರುಗುವ ಈ ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಚಿವ ಎಸ್.ಎ. ರಾಮದಾಸ್, ಅಖಿಲ ಭಾರತ ಆರ್ಯ ವೈಶ್ಯ ಮಹಾಸಭಾ ಅಧ್ಯಕ್ಷ ಆರ್.ಪಿ. ರವಿಶಂಕರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಮಾಜಿ ಮೇಯರ್ ಎಚ್.ಎನ್. ಶ್ರೀಕಂಠಯ್ಯ, ಕರೂರ್ ವೈಶ್ಯ ಬ್ಯಾಂಕ್ ಲಿಮಿಟೆಡ್‌ನ ನಿರ್ದೇಶಕ ಎಂ.ವಿ. ಶ್ರೀನಿವಾಸಮೂರ್ತಿ, ಬೆಳಗಾವಿಯ ರಿಟಾ ಡಿಸೋಜಾ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಎಂದು ತಿಳಿಸಿದ್ದಾರೆ.