ಸಂಗೀತ ವಿವಿಯಲ್ಲಿ ದಸರಾ ಸಾಂಸ್ಕೃತಿ ಕಾರ್ಯಕ್ರಮ : ಕುಲಸಚಿವ ಪ್ರೊ.ಎಂ.ಜಿ. ಮಂಜುನಾಥ ಮನವಿ

ಮೈಸೂರು ನಗರದ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ವತಿಯಿಂದ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಯುವ ಸೌರಭ ಕಾರ್ಯಕ್ರಮವನ್ನು ಕುಲಪತಿ ಪ್ರೊ.ಕೆ. ರಾಮಕೃಷ್ಣಯ್ಯ ಉದ್ಘಾಟಿಸಿದರು. ಪ್ರೊ.ಎಂ.ಜಿ. ಮಂಜುನಾಥ, ನಿರ್ಮಲ ಮಠಪತಿ, ಎಂ.ಡಿ. ಸುದರ್ಶನ್ ಇದ್ದರು.

Published on
ಮೈಸೂರು: ಈ ಬಾರಿಯ ನಾಡಹಬ್ಬ ದಸರಾ ಉತ್ಸವ ಸಂದರ್ಭ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು ಎಂದು ಕುಲಪತಿ ಕುಲಸಚಿವ ಪ್ರೊ.ಎಂ.ಜಿ. ಮಂಜುನಾಥ ಮನವಿ ಮಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ವತಿಯಿಂದ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಯುವ ಸೌರಭ ಕಾರ್ಯಕ್ರಮದಲ್ಲಿ ಮಾತನಾಡಿ, ನಗರದ ವಿವಿಧ ವೇದಿಕೆಯಲ್ಲಿ ದಸರಾ ಕಾರ್ಯಕ್ರಮ ನಡೆಯುತ್ತದೆ. ಅದೇ ರೀತಿ ಸಂಗೀತ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭೆ ತೋರ್ಪಡಿಸಲು ವಿವಿಯಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ಈ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗಮನ ಹರಿಸಬೇಕು ಎಂದು ಕೋರಿಕೊಂಡರು.
ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಕೆ. ರಾಮಕೃಷ್ಣಯ್ಯ ಮಾತನಾಡಿ, ಕಲೆಗಳನ್ನು ಸಂರಕ್ಷಿಸುವ ಯೋಧರು ಕಲಾವಿದರು. ನಾಡಿನ ಕಲೆ, ಸಂಸ್ಕೃತಿ ಉಳಿಸುವ ಕಾರ್ಯವನ್ನು ಕಲಾವಿದರು ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕಿ ನಿರ್ಮಲ ಮಠಪತಿ, ಸಹಾಯಕ ನಿರ್ದೇಶಕ ಎಂ.ಡಿ. ಸುದರ್ಶನ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net