ಕಾವೇರಿ ಕ್ರಿಯಾ ಸಮಿತಿ ವತಿಯಿಂದ ಬುಧವಾರ ನಗರದ ಅಶೋಕ ರಸ್ತೆಯಲ್ಲಿ ಪ್ರತಿಭಟನೆ ನಡೆಯಿತು. ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷ ಎಸ್.ಜಯಪ್ರಕಾಶ್, ಮುಖಂಡರಾದ ತೇಜೇಶ್ ಲೋಕೇಶ್ ಗೌಡ, ಮೆಲ್ಲಹಳ್ಳಿ ಮಹದೇವಸ್ವಾಮಿ, ಮೂಗೂರು ನಂಜುಂಡಸ್ವಾಮಿ, ಸುರೇಶ್ ಗೌಡ, ಕೆ.ಬಿ.ಲಿಂಗರಾಜು, ಸೋಮೇಗೌಡ, ಸಿಂಧುವಳ್ಳಿ ಶಿವಕುಮಾರ್ ಇದ್ದರು.
ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ನೀಡಿರುವ ಆದೇಶ ಖಂಡಿಸಿ ಕಾವೇರಿ ಕ್ರಿಯಾ ಸಮಿತಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು.
ನಗರದ ಅಶೋಕ ರಸ್ತೆಯಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ರಸ್ತೆ ಸಂಚಾರ ತಡೆದರು. ಬಳಿಕ ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ತಮಿಳುನಾಡು ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ನೀಡಿರುವ ಆದೇಶ ಹಿಂಪಡೆಯಬೇಕು. ರಾಜ್ಯದ ರೈತರ ಹಿತಾಸಕ್ತಿ ಕಾಪಾಡಬೇಕು ಎಂದು ಆಗ್ರಹಿಸಿದರು. ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಪರಿಸ್ಥಿತಿಯನ್ನು ಪರಿಗಣಿಸದೆ ಯಾವುದೇ ತೀರ್ಮಾನ ಕೈಗೊಳ್ಳಬಾರದು ಎಂದು ಒತ್ತಾಯಿಸಿದರು.
ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷ ಎಸ್.ಜಯಪ್ರಕಾಶ್, ಮುಖಂಡರಾದ ತೇಜೇಶ್ ಲೋಕೇಶ್ ಗೌಡ, ಮೆಲ್ಲಹಳ್ಳಿ ಮಹದೇವಸ್ವಾಮಿ, ಮೂಗೂರು ನಂಜುಂಡಸ್ವಾಮಿ, ಸುರೇಶ್ ಗೌಡ, ಕೆ.ಬಿ.ಲಿಂಗರಾಜು, ಸೋಮೇಗೌಡ, ಸಿಂದುವಳ್ಳಿ ಶಿವಕುಮಾರ್, ಸಂತೋಷ್, ಪ್ರಭುಶಂಕರ, ಹನುಮಂತಯ್ಯ, ಬಾಲಿ, ಶ್ರೀನಿವಾಸ, ಕೃಷ್ಣಪ್ಪ ಇದ್ದರು.