ಉನ್ನತ ಸ್ಥಾನಕ್ಕೇರಲು ಸಮರ್ಪಣಾ ಮನೋಭಾವ ಅಗತ್ಯ : ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ
ಬೋಗಾದಿಯ ಅಮೃತ ವಿಶ್ವ ವಿದ್ಯಾಪೀಠದಲ್ಲಿ ಗುರುವಾರ ಆಯೋಜಿಸಿದ್ದ ‘ಸದ್ಗಮಯ’ ಅಂತರ ಕಾಲೇಜು ಉತ್ಸವವನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಉದ್ಘಾಟಿಸಿದರು. ಅನಂತಾನಂದ ಚೈತನ್ಯ, ಪ್ರೋ. ಶೇಖರ್ ಬಾಬು, ಪ್ರೊ.ಜಿ. ರವೀಂದ್ರನಾಥ್, ರೇಖಾ ಭಟ್ ಇದ್ದರು.
Published on:
Copied
Follow Us
ಮೈಸೂರು: ಸಮರ್ಪಣಾ ಮನೋಭಾವ ಹಾಗೂ ಸತತ ಪರಿಶ್ರಮದಿಂದ ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೆ ಏರಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಹೇಳಿದರು.
ಬೋಗಾದಿಯ ಅಮೃತ ವಿಶ್ವ ವಿದ್ಯಾಪೀಠದಲ್ಲಿ ಗುರುವಾರ ಆಯೋಜಿಸಿದ್ದ ‘ಸದ್ಗಮಯ’ ಅಂತರ ಕಾಲೇಜು ಉತ್ಸವ ಉದ್ಘಾಟಿಸಿ ಮಾತನಾಡಿ, ಮೈಸೂರಿನಲ್ಲಿ ಪ್ರಾಧ್ಯಾಪಕರಾಗಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ನಂತರ ರಾಷ್ಟ್ರಪತಿಯಾದರು. ಮನೆ ಮನೆಗಳಿಗೆ ಪ್ರತಿಕೆ ಹಂಚುತ್ತಿದ್ದ ಡಾ.ಎಪಿಜೆ ಅಬ್ದುಲ್ ಕಲಾ ನಂತರ ವಿಜ್ಞಾನಿ, ರಾಷ್ಟ್ರಪತಿಯಾದರು. ಇದೆಲ್ಲ ಸಾಧ್ಯವಾಗಿದ್ದು ಅವರ ಸಮರ್ಪಣಾ ಮನೋಭಾವ ಹಾಗೂ ಸತತ ಪರಿಶ್ರಮದಿಂದ. ವಿದ್ಯಾರ್ಥಿಗಳು ಸಹ ಇದೇ ಹಾದಿಯಲ್ಲಿ ಸಾಗಬೇಕು ಎಂದು ಕರೆ ನೀಡಿದರು.
ಎಲ್ಲರಿಗೂ ಪ್ರತಿನಿತ್ಯ 24 ಗಂಟೆ ಸಮಯ ದೊರೆಯುತ್ತದೆ. ಆದರೆ, ಆ ಸಮಯವನ್ನು ಯಾರು ಯಾವ ರೀತಿ ಬಳಕೆ ಮಾಡಿಕೊ ಳ್ಳುತ್ತಾರೆ ಎಂಬುದು ಅತ್ಯಂತ ಮುಖ್ಯ. ವಿದ್ಯಾರ್ಥಿಗಳು ವಿದ್ಯಾಸಂಸ್ಥೆ ನೀಡುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಸಾಧನೆ ತೋರಬೇಕು. ಪ್ರತಿಯೊಂದು ವಿದ್ಯಾರ್ಥಿಗಳು ತಮ್ಮದೇ ಆದ ಪ್ರತಿಭೆ ಹೊಂದಿರುತ್ತಾರೆ. ಅವರ ಪ್ರತಿಭೆ ಪ್ರದರ್ಶನಕ್ಕೆ ಇದು ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಅತ್ಯಂತ ಅಗತ್ಯ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪ್ರಾಧ್ಯಾಪಕರು ಶ್ರಮಿಸ ಬೇಕು. ಅದೇ ರೀತಿ ವಿದ್ಯಾರ್ಥಿಗಳು ಸಮರ್ಪಣಾ ಮನೋಭಾವದಿಂದ ಕಲಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಸತತ ಹಾಗೂ ಪ್ರಾಮಾಣಿಕ ಪ್ರಯತ್ನದ ಮೂಲಕ ತಮ್ಮ ಗುರಿಯನ್ನು ತಲುಪಬೇಕು ಎಂದು ಕರೆ ನೀಡಿದರು.
ವಿದ್ಯಾಸಂಸ್ಥೆಯ ನಿರ್ದೇಶಕ ಅನಂತಾನಂದ ಚೈತನ್ಯ, ಅಸೋಸಿಯೇಟ್ ಡೀನ್ ಪ್ರೋ. ಶೇಖರ್ ಬಾಬು, ಪ್ರಾಂಶುಪಾಲ ಪ್ರೊ.ಜಿ. ರವೀಂದ್ರನಾಥ್, ಶೈಕ್ಷಣಿಕ ಸಂಯೋಜಕಿ ರೇಖಾ ಭಟ್ ಇದ್ದರು.