ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೇರಳೆ ಗೇಟ್‌ನಿಂದ ಬದನವಾಳು ಗ್ರಾಮದವರೆಗೆ ಜಿಂಕೆಗಳು ಹೆಚ್ಚಾಗಿ ರಸ್ತೆ ಅಪಘಾತದಿಂದ ಸಾವನ್ನಪ್ಪಿರುವ ಪ್ರಕರಣಗಳು ನಡೆಯುತ್ತಿವೆ. ರಸ್ತೆ ದಾಟುವ ವೇಳೆ ಈ ಘಟನೆ ನಡೆದಿದ್ದು, ಆ ಸ್ಥಳದಲ್ಲಿ ನಾಮಫಲಕ ಅಳವಡಿಸಲು ಕ್ರಮವಹಿಸುವುದಾಗಿ ವಲಯ ಅರಣ್ಯ ಅಧಿಕಾರಿ ನಿತಿನ್‌ಕುಮಾರ್ ತಿಳಿಸಿದ್ದಾರೆ.