ಸವಲತ್ತುಗಳನ್ನು ಜನಸಾಮಾನ್ಯರಿಗೆ ತಲುಪಿಸಿ

ಹನಗೋಡು ಹೋಬಳಿಯ ನೇರಳಕುಪ್ಪೆ ಗ್ರಾ.ಪಂ. ವತಿಯಿಂದ ಆಯೋಜಿಸಿದ್ದ ಸರ್ಕಾರಿ ಯೋಜನೆಗಳ ಅನುಷ್ಠಾನ ಮತ್ತು ಪ್ರಗತಿಯಾಗಿರುವ ಕಾರ್ಯಕ್ರಮಗಳ ಮಾಹಿತಿ ಸಭೆಯಲ್ಲಿ ಪಿಡಿಒ ವರಲಕ್ಷ್ಮೀ ಮಾತನಾಡಿದರು. ಗೀತಾ, ರುಕ್ಮಿಣಿ ಇದ್ದರು.
ಹನಗೋಡು ಹೋಬಳಿಯ ನೇರಳಕುಪ್ಪೆ ಗ್ರಾ.ಪಂ. ವತಿಯಿಂದ ಆಯೋಜಿಸಿದ್ದ ಸರ್ಕಾರಿ ಯೋಜನೆಗಳ ಅನುಷ್ಠಾನ ಮತ್ತು ಪ್ರಗತಿಯಾಗಿರುವ ಕಾರ್ಯಕ್ರಮಗಳ ಮಾಹಿತಿ ಸಭೆಯಲ್ಲಿ ಪಿಡಿಒ ವರಲಕ್ಷ್ಮೀ ಮಾತನಾಡಿದರು. ಗೀತಾ, ರುಕ್ಮಿಣಿ ಇದ್ದರು.
Published on
ಹನಗೋಡು: ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ತಳಮಟ್ಟದ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನಸಾಮಾನ್ಯರಿಗೆ ತಲುಪಿಸಿದರೆ ಸರ್ಕಾರದ ಯೋಜನೆಗಳು ಸಫಲತೆ ಕಾಣಲು ಸಾಧ್ಯ ಎಂದು ಗ್ರಾ.ಪಂ. ಅಧ್ಯಕ್ಷೆ ಗೀತಾ ಸುರೇಶ್ ತಿಳಿಸಿದರು.
ಹನಗೋಡು ಹೋಬಳಿ ನೇರಳಕುಪ್ಪೆ ಗ್ರಾ.ಪಂ. ವತಿಯಿಂದ ಶುಕ್ರವಾರ ಆಯೋಜಿಸಿದ್ದ ಸರ್ಕಾರಿ ಯೋಜನೆಗಳ ಅನುಷ್ಠಾನ ಮತ್ತು ಪ್ರಗತಿಯಾಗಿರುವ ಕಾರ್ಯಕ್ರಮಗಳ ಮಾಹಿತಿ ಸಭೆಯಲ್ಲಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗ್ರಾಮೀಣ ಜನರ ಮನೆ ಬಾಗಿಲಿಗೆ ಅನೇಕ ಯೋಜನೆ ಹಾಗೂ ಸೌಲಭ್ಯಗಳನ್ನು ಜಾರಿಗೊಳಿಸಿದೆ. ಆದರೆ ತಳಮಟ್ಟದ ಕೆಲ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆ ಸಿಬ್ಬಂದಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸದ ಕಾರಣ ಗ್ರಾಮೀಣ ಜನರು ಸೌಲಭ್ಯ ವಂಚಿತರಾಗುತ್ತಿದ್ದಾರೆ. ಇದರಿಂದ ಸರ್ಕಾರಗಳ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ದಕ್ಕುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.
ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗಳಲ್ಲಿ ಜನರಿಗೆ ದೊರಕಿರುವ ಸವಲತ್ತುಗಳು ಮತ್ತು ಅನುಷ್ಠಾನಕ್ಕೆ ಇರುವ ತೊಡಕುಗಳ ಬಗ್ಗೆ ಚರ್ಚೆ ನಡೆಸಿದರು.
ಸಭೆಯಲ್ಲಿ ಉಪಾಧ್ಯಕ್ಷೆ ರುಕ್ಮಿಣಿ ಸುರೇಶ್, ಪಿಡಿಒ ವರಲಕ್ಷ್ಮೀ, ಮುಖ್ಯಶಿಕ್ಷಕ ಕುಮಾರಸ್ವಾಮಿ, ಆರೋಗ್ಯ ಇಲಾಖೆಯ ಮಹಿಳಾ ಸಂರಕ್ಷಣಾಧಿಕಾರಿ ನಿತ್ಯಾ, ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರಶೇಖರ್, ಸ್ವಾಸ್ಥ ಸ್ವರಾಜ್ ಯೋಜನೆಯ ರವಿ ಸಿ.ಎಸ್., ಮಹದೇವ್ ಎಂ.ಎಂ. ಸೇರಿದಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net