ಪರಿಶಿಷ್ಟ ಜಾತಿಯ ಪಟ್ಟಿಯಿಂದ ಆದಿಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಜಾತಿಗಳನ್ನು ಪರಿಶಿಷ್ಟ ಜಾತಿಯ 101 ಜಾತಿಗಳ ಪಟ್ಟಿಯಿಂದ ತೆಗೆಯಲು ರಾಜ್ಯ ಸರ್ಕಾರ ಕೂಡಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಮಾಜ ಕಲ್ಯಾಣ ಇಲಾಖೆಯನ್ನೇ ತಪ್ಪು ದಾರಿಗೆ ಎಳೆದು, ಒಳಮೀಸಲಾತಿ ಬಗ್ಗೆ ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಇಲಾಖೆಯನ್ನು ನಿಷ್ಕ್ರಿಯಗೊಳಿಸುತ್ತಿರುವ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಇಲಾಖೆ ಆಯುಕ್ತ ರಾಕೇಶ್ ಕುಮಾರ, ಸಲಹೆಗಾರ ವೆಂಕಟಯ್ಯನವರನ್ನು ಕೂಡಲೇ ವರ್ಗಾಯಿಸಬೇಕು. ಕೇಂದ್ರ ಸರ್ಕಾರ ಹುದ್ದೆಗಳನ್ನು ಹೊರತುಪಡಿಸಿ, ರಾಜ್ಯ ಸರ್ಕಾರದ ವ್ಯಾಪ್ತಿಗೊಳಪಡುವ ಗುತ್ತಿಗೆ ಕಾಮಗಾರಿ, ಗುತ್ತಿಗೆ ಕಾರ್ಮಿಕರ ನೇಮಕಾತಿ, ತಾತ್ಕಾಲಿಕ ನೇಮಕಾತಿ ಸೇರಿದಂತೆ ಅತಿಥಿ ಉಪನ್ಯಾಸಕರು ಮತ್ತು ಶಿಕ್ಷಕರು ನೇಮಕಾತಿಯಲ್ಲೂ ಅನ್ವಯಿಸಿ ಆದೇಶಿಸಬೇಕು. ಪ.ಜಾತಿ ಅಲೆಮಾರಿ ಸಮುದಾಯಿಗಳಿಗೆ ಶೇ.1 ಒಳಮೀಸಲಾತಿ ಜಾರಿಗೊಳಿಸಬೇಕು. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊರತುಪಡಿಸಿ, ರಾಜ್ಯದ ವಿವಿಧ ಪಾಲಿಕೆ, ವಿವಿಧ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು, ಯುಜಿಡಿ ಕಾರ್ಮಿಕರು, ವಾಹನ ಚಾಲಕರು, ಲೋಡರ್ಸ್, ಕ್ಲೀನರ್ಸ್‌ಗಳನ್ನು ಕೂಡಲೇ ಕಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.