ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮದಲ್ಲಿ ಕೈಗೊಳ್ಳದ ಹಲವು ಕಾಮಗಾರಿಗಳಿಗೆ ಬಿಲ್ ಮಾಡಲಾಗಿದೆ. ಕೆಲವರ ಜಮೀನಿನಲ್ಲಿ ಯಾವುದೇ ಕಾಮಗಾರಿ ಮಾಡದಿದ್ದರೂ, ನರೇಗಾ ಯೋಜನೆಯಡಿ ರಸ್ತೆ ಕಾಮಗಾರಿ ಮಾಡಿದೆ ಎಂದು ದಾಖಲಿಸಿ ಹಣ ಪಡೆಯಲಾಗಿದೆ. ಇದಕ್ಕೆ ಸಂಬಂಧಪಟ್ಟ ಎಲ್ಲ ದಾಖಲೆಗಳನ್ನು ಈಗಾಗಲೇ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಗೆ ನೀಡಿದ್ದೇವೆ ಎಂದು ತಿಳಿಸಿದರು.