ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಸಿ.ಬಸವರಾಜು ಅವರಿಗೆ ವಿಧಾನಪರಿಷತ್ ಸದಸ್ಯತ್ವ ಸ್ಥಾನ ನೀಡುವಂತೆ ಒತ್ತಾಯಿಸಿ ಮೈಸೂರು ಪ್ರಾಂತ್ಯ ನಾಯಕ ಸಂಘಗಳ ಒಕ್ಕೂಟದ ವತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು. ಕ್ಯಾತನಹಳ್ಳಿ ನಾಗರಾಜು, ಲೋಕೇಶ್ ಪಿಯ, ಉದ್ಬೂರು ಕೃಷ್ಣ, ದೇವರಾಜ್ ಟಿ.ಕಾಟೂರ್ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಮೈಸೂರು ಪ್ರಾಂತ್ಯ ನಾಯಕ ಸಂಘಗಳ ಒಕ್ಕೂಟದಿಂದ ಮನವಿ
ನಾಯಕ ಸಮಾಜದ ಹಿರಿಯ ಮುಖಂಡ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಸಿ.ಬಸವರಾಜು ಅವರಿಗೆ ವಿಧಾನಪರಿಷತ್ ಸದಸ್ಯತ್ವ ಸ್ಥಾನ ನೀಡುವಂತೆ ಒತ್ತಾಯಿಸಿ ಮೈಸೂರು ಪ್ರಾಂತ್ಯ ನಾಯಕ ಸಂಘಗಳ ಒಕ್ಕೂಟದ ವತಿಯಿಂದ ಸೋಮವಾರ ಮೆರವಣಿಗೆ ನಡೆಸಿ ಕಾಂಗ್ರೆಸ್ ಭವನದಲ್ಲಿ ಮನವಿ ಸಲ್ಲಿಸಲಾಯಿತು.
ಎಸ್.ಸಿ.ಬಸವರಾಜು ಅವರು ಮೈಸೂರು ಭಾಗದ ಪ್ರಭಾವಿ ಮುಖಂಡರಾಗಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದಾರೆ. 40 ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಜತೆಗೆ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ, ಶ್ರೀ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ.
ಕೆಪಿಸಿಸಿ ಕಾರ್ಯದರ್ಶಿಯಾಗಿ ನಂತರ ಪ್ರಧಾನ ಕಾರ್ಯದರ್ಶಿಯಾಗಿ ರಾಜ್ಯಾದ್ಯಂತ ಪಕ್ಷ ವಹಿಸಿದ್ದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದಾರೆ. ಪರಿಶಿಷ್ಟ ಪಂಗಡದ ಮೀಸಲಾತಿಯ 15 ಕ್ಷೇತ್ರದಗಳ ಪೈಕಿ 14ರಲ್ಲಿ ಕಾಂಗ್ರೆಸ್ ಗೆಲ್ಲಲು ಪ್ರಮುಖಪಾತ್ರ ವಹಿಸಿದ್ದಾರೆ.
ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲೂ ಕಾಂಗ್ರೆಸ್ ಹೆಚ್ಚಿನ ಸಂಖ್ಯೆಯಲ್ಲಿ ಜಯ ಸಾಧಿಸಲು ಕಾರಣರಾಗಿದ್ದಾರೆ. ಆದ್ದರಿಂದ ಎಸ್.ಸಿ.ಬಸವರಾಜು ಅವರಿಗೆ ಎಂಎಲ್‌ಸಿ ಸ್ಥಾನ ನೀಡಬೇಕು ಎಂದು ಒತ್ತಾಯಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್ ಹಾಗೂ ನಗರಾಧ್ಯಕ್ಷ ಆರ್.ಮೂರ್ತಿ ಮೂಲಕ ಕೆಪಿಸಿಸಿ ಅಧ್ಯಕ್ಷರು ಹಾಗೂ ಪಕ್ಷದ ವರಿಷ್ಠರಿಗೆ ಮನವಿ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಕ್ಯಾತನಹಳ್ಳಿ ನಾಗರಾಜು, ನಗರ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯ, ಮುಖಂಡರಾದ ಉದ್ಬೂರು ಕೃಷ್ಣ, ದೇವರಾಜ್ ಟಿ.ಕಾಟೂರ್, ಎಸ್.ಆರ್.ರವಿಕುಮಾರ್, ಹೊಂಗನೂರು ಚಂದ್ರು, ಅರಕಲವಾಡಿ ಸೋಮನಾಯಕ, ಹೊಸಕೋಟೆ ಬಸವರಾಜು, ಕುಪ್ಪಳ್ಳಿ ಮಹದೇವನಾಯಕ, ಪಾಳ್ಯ ಕೃಷ್ಣ, ಸಿದ್ದರಾಜು ಇತರರಿದ್ದರು.