ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ನಡೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನ ಗೆಲ್ಲುವ ಮೂಲಕ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಕಾರಣವಾಯಿತು
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ನಂತರ ಸಿದ್ದರಾಮಯ್ಯ ಅವರು ರಾಜ್ಯದಲ್ಲಿರುವ ಎಲ್ಲ ಸಮುದಾಯಗಳನ್ನು ಗಣನೆಗೆ ತೆಗೆದುಕೊಂಡು ವಿಶೇಷ ಅನುದಾನ, ನಿಗಮ ಮಂಡಳಿಗಳನ್ನು ಸ್ಥಾಪಿಸುವ ಮೂಲಕ ಸಮುದಾಯದ ಏಳಿಗೆಗೆ ಶ್ರಮಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದ ನಂತರ ಕಾಂಗ್ರೆಸ್ ಕಷ್ಟದ ಪರಿಸ್ಥಿಗೆ ತಲುಪಲಿದೆ.
ಸಿದ್ದರಾಮಯ್ಯ ಅವರನ್ನೇ ಐದು ವರ್ಷವೂ ಮುಖ್ಯಮಂತ್ರಿ ಎಂದು ಘೋಷಿಸಬೇಕೆಂದು ಎಂಬ ಒತ್ತಾಯ ಜೋರಾಗಿದೆ. ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಅವಧಿ ಪೂರ್ಣಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಅವಕಾಶ ನೀಡಬೇಕು ಎಂದು ರಾಜ್ಯ ದಲಿತ ಹಿಂದುಳಿದ ಅಲ್ಪಸಂಖ್ಯಾತ ವೇದಿಕೆ ಆಗ್ರಹಿಸಿದೆ.
ನಗರದ ಗನ್ ಹೌಸ್ ಬಳಿ ಇರುವ ಬಸವ ಪುತ್ಥಳಿ ಆವರಣದಲ್ಲಿ ರಾಜ್ಯ ದಲಿತ ಹಿಂದುಳಿದ ಅಲ್ಪಸಂಖ್ಯಾತ ವೇದಿಕೆ ವತಿಯಿಂದ ನಡೆದ ನಾನಾ ಸಮುದಾಯದ ಮುಖಂಡರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ನಡೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನ ಗೆಲ್ಲುವ ಮೂಲಕ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಕಾರಣವಾಯಿತು. ಈ ದೊಡ್ಡ ಮಟ್ಟದ ಗೆಲುವಿಗೆ ಸಿದ್ದರಾಮಯ್ಯನವರ ನಾಯಕತ್ವ ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸಿದ್ದು ಕಾರಣವಾಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ನೆಲೆ ತುಂಬಾ ಭದ್ರವಾಗಿರುವುದಕ್ಕೂ ಮೂಲ ಕಾರಣ ಸಿದ್ದರಾಮಯ್ಯ ಅವರ ಆಡಳಿತ, ಜನಪರ ಗ್ಯಾರಂಟಿ ಯೋಜನೆಗಳ ನಿರ್ವಹಣೆ.
ಜತೆಗೆ ಎಲ್ಲ ಸಮುದಾಯಗಳ ಮೇಲೆ ಅವರು ಇಟ್ಟಿರುವ ಪ್ರೀತಿ, ಕಾಳಜಿ, ಸಾಮಾಜಿಕ ನ್ಯಾಯ ಪರ ಸಿದ್ಧಾಂತ. ಹೀಗಾಗಿ ಅವರನ್ನೇ ಐದು ವರ್ಷವೂ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಪಿ.ಜಯರಾಜ್ ಹೆಗಡೆ, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕಾಂಗ್ರೆಸ್ ಶಾಸಕರು, ಪ್ರತಿ ಪಕ್ಷದ ನಾಯಕರು ನಿತ್ಯವೂ ಹೇಳಿಕೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವರಿಷ್ಠರು ಈ ಎಲ್ಲ ಗೊಂದಲಕ್ಕೆ ತೆರೆ ಎಳೆದು ಸಿದ್ದರಾಮಯ್ಯ ಅವರನ್ನು ಪೂರ್ಣ ಅವಧಿಗೆ ವಿಸ್ತರಿಸಬೇಕು ಎಂದರು. ಈ ಸಂಬಂಧ ಸದ್ಯದಲ್ಲಿಯೇ ರಾಜ್ಯ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ ಅವರಿಗೆ ಈ ಬಗ್ಗೆ ವೇದಿಕೆಯಿಂದ ಮನವಿ ಸಲ್ಲಿಸಲಾಗುತ್ತದೆ ಎಂದರು.
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ನಂತರ ಸಿದ್ದರಾಮಯ್ಯ ಅವರು ರಾಜ್ಯದಲ್ಲಿರುವ ಎಲ್ಲ ಸಮುದಾಯಗಳನ್ನು ಗಣನೆಗೆ ತೆಗೆದುಕೊಂಡು ವಿಶೇಷ ಅನುದಾನ, ನಿಗಮ ಮಂಡಳಿಗಳನ್ನು ಸ್ಥಾಪಿಸುವ ಮೂಲಕ ಸಮುದಾಯದ ಏಳಿಗೆಗೆ ಶ್ರಮಿಸಿದ್ದಾರೆ. ಮತ್ತೊಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡಿ ಹಣಕಾಸನ್ನು ಸರಿದೂಗಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ 2028ರ ಚುನಾವಣೆ ನಂತೆ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿ. ಅವರು ಸಹ ಪಕ್ಷ ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದ್ದಾರೆ,ಎಂದು ತಿಳಿಸಿದರು.
ವೇದಿಕೆ ಪ್ರಧಾನ ಕಾರ್ಯದರ್ಶಿ ಕಂಸಾಳೆ ರವಿ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದ ನಂತರ ಕಾಂಗ್ರೆಸ್ ಕಷ್ಟದ ಪರಿಸ್ಥಿಗೆ ತಲುಪಲಿದೆ. ಈ ಸಂಬಂಧ ಪಕ್ಷದ ವರಿಷ್ಠರಿಗೆ ಗಮನ ಸೆಳೆಯಲು ಶೀಘ್ರದಲ್ಲಿಯೇ ದೆಹಲಿ ಚಲೋ ಮಾಡಲು ವೇದಿಕೆ ನಿರ್ಧರಿಸಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷ ಸತ್ಯನಾರಾಯಣ್, ಯಾದವ ಗೊಲ್ಲ ಯುವ ಸಮಿತಿಯ ಶ್ರೀಕಾಂತ, ಅಲೆಮಾರಿ, ಅರೆ ಅಲೆಮಾರಿ ಸಮಿತಿ ಜಿಲ್ಲಾಧ್ಯಕ್ಷ ರಾಮಕೃಷ್ಣ, ಪೌರಕಾರ್ಮಿಕರ ಮಹಾಸಂಘದ ನಾಗರಾಜು ಇದ್ದರು.