ಅರ್ಹರಿಗೆ ಗೋಪಾಲಪುರದ ಜಾಗ ನೀಡಲು ಒತ್ತಾಯ

ಎನ್. ರಾಚಯ್ಯ ಯುವಕರ ಸಂಘದ ಪದಾಧಿಕಾರಿಗಳು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಎನ್. ರಾಚಯ್ಯ ಯುವಕರ ಸಂಘದ ಪದಾಧಿಕಾರಿಗಳು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
Published on
ಗೋಪಾಲಪುರದ ಸರ್ವೇ ನಂ.7ರ ಜಾಗವನ್ನು ಆ ಗ್ರಾಮದ ಅರ್ಹ ಮಾದಿಗರಿಗೆ ನೀಡಬೇಕು ಎಂದು ಆಗ್ರಹಿಸಿ ಎನ್.ರಾಚಯ್ಯ ಯುವಕರ ಸಂಘದ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾವಣೆಗೊಂಡ ಪ್ರತಿಭಟನಾಕಾರರು, ನಾನಾ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಎಂದಿನಂತೆ ಅಧಿಕಾರಿಗಳು ನಿರ್ಲಕ್ಷೃ ಧೋರಣೆ ತೋರಿದರೆ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮತ ಚಲಾಯಿಸುವುದನ್ನು ಬಹಿಷ್ಕರಿಸುತ್ತೇವೆ. ಮುಂದಿನ ದಿನಗಳಲ್ಲಿ ಅರೆಬೆತ್ತಲೆ ಮೆರವಣಿಗೆ ಮಾಡಲಾಗುತ್ತದೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಬಿ.ಮಹೇಶ್ ಕುಮಾರ್, ಉಪಾಧ್ಯಕ್ಷ ಎಲ್.ರಾಜೇಶ್, ಕಾರ್ಯದರ್ಶಿ ಆರ್.ಮೋಹನ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net