ಶಾಸಕ ಮಂಕಾಳ ವೈದ್ಯಗೆ ಸಚಿವ ಸ್ಥಾನ ನೀಡಲು ಆಗ್ರಹ

ಶಾಸಕ ಮಂಕಾಳ ವೈದ್ಯ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಸೋಮವಾರ ಗಾಂಧಿ ವೃತ್ತದಲ್ಲಿ ಪ್ರತಿಭಟಿಸಲಾಯಿತು. ಭಾಗ್ಯರಾಜ್, ಹರೀಶ್ ಇತರರು ಇದ್ದರು.
ಶಾಸಕ ಮಂಕಾಳ ವೈದ್ಯ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಸೋಮವಾರ ಗಾಂಧಿ ವೃತ್ತದಲ್ಲಿ ಪ್ರತಿಭಟಿಸಲಾಯಿತು. ಭಾಗ್ಯರಾಜ್, ಹರೀಶ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತಿಭಟನೆ
  • ಹೈಕಮಾಂಡ್ ನಡೆಗೆ ಬೆಂಬಲಿಗರ ಅಸಮಾಧಾನ

ಶಾಸಕ ಮಂಕಾಳ ವೈದ್ಯಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಸೋಮವಾರ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಂಪುಟ ವಿಸ್ತರಣೆ, ಪುನಾರಚನೆ ವೇಳೆ ಭಟ್ಕಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಂಕಾಳ ವೈದ್ಯ ಅವರನ್ನು ಕೈಬಿಡಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿದ ನೂತನ ಸಚಿವರ ಮೊದಲ ಅಧಿಕೃತ ಪಟ್ಟಿಯಲ್ಲಿ ಮಂಕಾಳ ವೈದ್ಯ ಅವರ ಹೆಸರು ಪ್ರಕಟವಾಗಿತ್ತು. ಆದರೆ, ಕೆಲವೇ ಗಂಟೆಗಳಲ್ಲಿ ಪರಿಷ್ಕೃತ ಪಟ್ಟಿ ಬಿಡುಗಡೆ ಮಾಡಿದ ಎಐಸಿಸಿ, ಮಂಕಾಳ ವೈದ್ಯ ಅವರ ಹೆಸರನ್ನು ಕೈಬಿಟ್ಟು ಅವರ ಬದಲಿಗೆ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಅವಕಾಶ ನೀಡಿದೆ. ಈ ಬದಲಾವಣೆಗೆ ಹೈಕಮಾಂಡ್ ಸ್ಪಷ್ಟನೆ ನೀಡಬೇಕು. ಮೊದಲ ಪಟ್ಟಿಯಲ್ಲಿ ಇದ್ದ ಮಂಕಾಳ ವೈದ್ಯರ ಹೆಸರನ್ನು ಕೈಬಿಟ್ಟಿದ್ದು ಯಾಕೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net