ಉಪಅರಣ್ಯ ಸಂರಕ್ಷಣಾಧಿಕಾರಿ ಸಾವು ಇನ್ನೂ ನಿಗೂಢ

ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಂತರಾಜ್ ಚೌಹಾಣ್
ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಂತರಾಜ್ ಚೌಹಾಣ್
Published on

ಪ್ರಮುಖ ಮುಖ್ಯಾಂಶಗಳು

  • ಶವ ಪತ್ತೆಯಾದ ಜಾಗಕ್ಕೆ ಅಪರಾಧ ದೃಶ್ಯ(ಸೀನ್ ಆಫ್ ಕ್ರೈಂ) ತಜ್ಞರು ಭೇಟಿ ನೀಡಿ ಪರಿಶೀಲನೆ
  • ಯಾವ ರೀತಿ ಸಾವಾಗಿದೆ ಎಂಬುದು ಮರಣೋತ್ತರ ಪರೀಕ್ಷೆ ಹಾಗೂ ಎಫ್‌ಎಸ್‌ಎಲ್ ವರದಿಗಳ ಮೂಲಕ ಪತ್ತೆ
ಮೈಸೂರು: ತಿ.ನರಸೀಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಂತರಾಜ್ ಚೌಹಾಣ್ ಸಾವಿನ ಪ್ರಕರಣ ಇನ್ನೂ ರಹಸ್ಯವಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಕಾಂತರಾಜ್ ಅವರ ಶವ ಪತ್ತೆಯಾದ ಜಾಗಕ್ಕೆ ಅಪರಾಧ ದೃಶ್ಯ(ಸೀನ್ ಆಫ್ ಕ್ರೈಂ) ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ಬಗ್ಗೆ ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ. ಯಾವ ರೀತಿ ಸಾವಾಗಿದೆ ಎಂಬುದು ಮರಣೋತ್ತರ ಪರೀಕ್ಷೆ ಹಾಗೂ ಎಫ್‌ಎಸ್‌ಎಲ್ ವರದಿಗಳ ಮೂಲಕ ತಿಳಿದು ಬರಲಿದೆ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಹೇಳಿದ್ದಾರೆ. 
ಮೃತ ಕಾಂತರಾಜ್ ಮೂಲತಃ ವಿಜಯಪುರ ಜಿಲ್ಲೆಯವರಾಗಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಕೆ.ಆರ್.ಆಸ್ಪತ್ರೆಯಲ್ಲಿ ನಡೆಸಲಾಯಿತು. ಈ ಸಂಬಂಧ ಕುಟುಂಬಸ್ಥರು ದೂರು ನೀಡಿದ್ದು, ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂತರಾಜ್ ಹಾಗೂ ಕೊಪ್ಪಳ ಜಿಲ್ಲೆ ಗಂಗಾವತಿ ಮೂಲದ ಸ್ನೇಹಿತ ಮಲ್ಲನಗೌಡ ಪಾಟೀಲ್ ಭಾನುವಾರ ನಗರದ ಗ್ರಾಮಾಂತರ ಬಸ್ ನಿಲ್ದಾಣ ಸಮೀಪದ ಖಾಸಗಿ ಹೋಟೆಲ್‌ನಲ್ಲಿ ರೂಮ್ ಪಡೆದು ವಾಸ್ತವ್ಯ ಹೂಡಿದ್ದರು.
 ಸೋಮವಾರ ಬೆಳಗ್ಗೆ ಹೋಟೆಲ್ ಬದಿಯಲ್ಲಿ ಕಾಂತರಾಜ್ ಶವ ಪತ್ತೆಯಾಗಿತ್ತು. ಮೃತದೇಹದ ಮೂಗಿನಲ್ಲಿ ರಕ್ತ ಕಂಡುಬಂದಿದೆ. ಉಳಿದಂತೆ ಯಾವುದೇ ಗಾಯಗಳು ಪತ್ತೆಯಾಗಿರಲಿಲ್ಲ. ಇದುವೇ ಅನುಮಾನ ಮೂಡಿಸುವಂತಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net