ಮೈಸೂರಿನ ಅಭಿವೃದ್ಧಿ ಮತ್ತು ದಸರೆಗೆ ಹೊಸ ರೂಪ : ಸಿಎಂ ಡಿ.ಕೆ. ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
Published on

ಮೈಸೂರು: ಯೋಜನಾಬದ್ಧ ನಗರವಾಗಿರುವ ಮೈಸೂರಿನ ಅಭಿವೃದ್ಧಿಗೆ ಸರ್ಕಾರ ಹೊಸ ರೂಪ ನೀಡಲಿದ್ದು, ಬೆಂಗಳೂರಿಗಿಂತ ಉತ್ತಮವಾದ ಯೋಜನೆಗಳನ್ನು ಇಲ್ಲಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಹೊಸ ರೂಪ ನೀಡಲು ಮಾರ್ಗದರ್ಶನ ನೀಡಿದ್ದಾರೆ. ಮೈಸೂರಿನ ಅಭಿವೃದ್ಧಿಗೆ ವಿಶೇಷ ಸಭೆ ಆಯೋಜಿಸಲಾಗುವುದು ಎಂದು ಹೇಳಿದರು.
ಬೆಂಗಳೂರಿನ ಮೇಲೆ ಒತ್ತಡ ಕಡಿಮೆ ಮಾಡಲು ಗುಲ್ಬರ್ಗ, ಬೆಳಗಾವಿ, ಹುಬ್ಬಳಿ-ಧಾರವಾಡ, ಮೈಸೂರು ಜಿಲ್ಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಇಲ್ಲಿ ಶಿಕ್ಷಣ, ಆರೋಗ್ಯ, ಉದ್ಯೋಗಕ್ಕೆ ಆದ್ಯತೆ ನೀಡಲಾಗುವುದು. ಇಡೀ ರಾಜ್ಯದಲ್ಲಿ ಎಲ್ಲ ಸಣ್ಣ, ದೊಡ್ಡ ನಗರಗಳಲ್ಲಿ ರಿಂಗ್‌ರೋಡ್ ನಿರ್ಮಾಣ ಮಾಡಲು ಮುಂದಾಗಿದ್ದೇವೆ. ಇದರಿಂದ ಮುಂದೆ ಸಂಚಾರ ದಟ್ಟಣೆ ಕಡಿಮೆಯಾಗಲಿದೆ ಎಂದರು.
ಮೈಸೂರಿನಿಂದ ಬೆಂಗಳೂರಿಗೆ ಒಂದೂವರೆ ಗಂಟೆಯೊಳಗೆ ತಲುಪಬಹುದು. ಆದರೆ, ಕೆಂಗೇರಿಯಿಂದ ಬೆಂಗಳೂರು ನಗರದೊಳಗೆ ಪ್ರವೇಶಿಸಲು ಒಂದೂವರೆ ಗಂಟೆ ಬೇಕಾಗಿದೆ. ಈ ಸಮಸ್ಯೆಯ ಕುರಿತು ಶಾಸಕರು ನನ್ನ ಗಮನ ಸೆಳೆದಿದ್ದಾರೆ. ಆ ಸಮಸ್ಯೆ ಪರಿಹರಿಸುವ ಕುರಿತು ಚಿಂತನೆ ನಡೆಸುತ್ತಿದ್ದೇವೆ ಎಂದು ನುಡಿದರು.
ದಸರೆಗೆ ಹೊಸ ರೂಪ:
ನಾಡಹಬ್ಬ ದಸರಾಗೆ ಹೊಸ ರೂಪ ನೀಡಲು ಉದ್ದೇಶಿಸಲಾಗಿದ್ದು, ಜಂಬೂಸವಾರಿ ಮೆರವಣಿಗೆಯಲ್ಲಿ ಭೂಸೇನೆ, ವಾಯುಸೇನೆ ತಂಡ ಭಾಗವಹಿಸಲು ಸೇನಾ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಂಬೂಸವಾರಿ ಮೆರವಣಿಗೆ ಸಂದರ್ಭ ಎಲ್ಲ ಚಲನಚಿತ್ರ ನಟ, ನಟಿಯರು ಭಾಗವಹಿಸಲು ಮನವಿ ಮಾಡಿದ್ದೇನೆ. ಚಲನಚಿತ್ರಕ್ಕೆ ಸಂಬಂಧಿಸಿದ ಪ್ರತ್ಯೇಕ ಸ್ತಬ್ಧಚಿತ್ರ ಹೊರಡಿಸಲು ಚಲನಚಿತ್ರ ವಾಣಿಜ್ಯ ಮಂಡಳಿ ಅವರಲ್ಲಿ ಮನವಿ ಮಾಡಿದ್ದೇನೆ. ಡೊಳ್ಳು, ಕಂಸಾಳೆ ಸೇರಿದಂತೆ ವಿವಿಧ ಕಲಾ ಪ್ರಕಾರಗಳನ್ನು ಒಂದು ಗುಂಪು ಮಾಡಿ ಜಂಬೂಸವಾರಿಯಲ್ಲಿ ಭಾಗವಹಿಸುವಂತೆ ಮಾಡುತ್ತೇವೆ ಎಂದು ಹೇಳಿದರು.
ಬರಗಾಲ ಇರುವ ಹಿನ್ನೆಲೆಯಲ್ಲಿ ಈ ಬಾರಿ ಸರಳ ದಸರಾ ಆಚರಿಸಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಪ್ರವಾಸೋ ದ್ಯಮದ ದೃಷ್ಟಿಯಿಂದ ಅದ್ದೂರಿಯಾಗಿ ಆಚರಿಸಲಾಗುವುದು. ಈ ಬಾರಿಯ ದಸರೆಯಲ್ಲಿ ಕಂಬಳ ಆಯೋಜಿಸಲಾಗುವುದು. ಕೆಲವರು ಅದಕ್ಕೆ ವಿರೋಧ ಮಾಡುತ್ತಿದ್ದಾರೆ. ಯಾವ ಕಾರಣಕ್ಕೆ ವಿರೋಧ ಮಾಡುತ್ತಿದ್ದೇವೆ ಎಂಬುದನ್ನು ಅವರು ಹೇಳಲಿ. ಇದರಿಂದ ಪರಿಸರಕ್ಕೆ ಯಾವುದೇ ರೀತಿಯಲ್ಲೂ ಹಾನಿಯಾಗುವುದಿಲ್ಲ. ಮರವನ್ನು ಕತ್ತರಿಸುವುದಿಲ್ಲ ಎಂದರು.
ಜಂಬೂಸವಾರಿ ಮೆರವಣಿಗೆಯಲ್ಲಿ ವಿವಿಧ ಸಮಿತಿ ಸದಸ್ಯರು ಸಾಗುವುದಕ್ಕೆ ಕಡಿವಾಣ ಹಾಕಲಾಗುವುದು. ಅಲ್ಲದೆ, ಹೊಸ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಜಂಬೂಸವಾರಿ ಮೆರವಣಿಗೆಯನ್ನು ದೇಶ, ವಿದೇಶದ ಜನರು ನೋಡುವ ಹಾಗೆ ಮಾಡುತ್ತೇವೆ. ದಸರಾ ಅತಿಥಿ ಆಯ್ಕೆ ಕುರಿತು ಚರ್ಚೆ ನಡೆಯುತ್ತಿದ್ದು, ಇನ್ನೂ ಅಂತಿಮಗೊಳಿಸಿಲ್ಲ ಎಂದು ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net