

ಪ್ರಮುಖ ಮುಖ್ಯಾಂಶಗಳು
ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ ಅವರು ಕ್ಷೇತ್ರದ ಎರಡು ವಾರ್ಡ್‌ಗಳಲ್ಲಿ ಒಟ್ಟು ₹2.54 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ-4 ವ್ಯಾಪ್ತಿಯ ಗೋಕುಲಂ ವಾರ್ಡ್ ನಂ.6ರಲ್ಲಿ ನಗರಪಾಲಿಕೆ ಅನುದಾನದಡಿ ₹2 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಗೋಕುಲಂ ಕಾಂಟೂರ್ ರಸ್ತೆಯ ಸಿದ್ದಲಿಂಗೇಶ್ವರ ಗ್ಯಾಸ್ ಏಜೆನ್ಸಿಯಿಂದ 1ನೇ ಮುಖ್ಯ ರಸ್ತೆಯ ಡಾ. ಪುನೀತ್ ರಾಜ್‌ಕುಮಾರ್ ವೃತ್ತದವರೆಗೆ ಯುಜಿಡಿ ಕಾಮಗಾರಿಯಿಂದ ಹಾಳಾಗಿರುವ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು.