ಧರ್ಮಸ್ಥಳ ಗ್ರಾಮಾಭಿವೃದ್ಧಿ ಸೇವೆ ವಿಶ್ವಕ್ಕೆ ಮಾದರಿ

ಡಾ.ವೀರೇಂದ್ರ ಹೆಗ್ಗಡೆ ಅವರ ಪತ್ನಿ ಹೇಮಾವತಿ ಅವರ ಹುಟ್ಟುಹಬ್ಬ ಅಂಗವಾಗಿ ಬೆಟ್ಟದಪುರ ವಲಯ ಯೋಜನಾಧಿಕಾರಿ ಸಂತೋಷ್ ಕುಮಾರ್ ಜೈನ್ ಮಾರ್ಗದರ್ಶನದಲ್ಲಿ ಸಂಸ್ಥೆಯಿಂದ ಮಾಸಾಶನ ಪಡೆಯುತ್ತಿರುವ ಫಲಾನುಭವಿಗಳ ಮನೆಗೆ ಭೇಟಿ ನೀಡಿ ಹಣ್ಣು, ಹಂಪಲು ವಿತರಿಸಲಾಯಿತು.
ಡಾ.ವೀರೇಂದ್ರ ಹೆಗ್ಗಡೆ ಅವರ ಪತ್ನಿ ಹೇಮಾವತಿ ಅವರ ಹುಟ್ಟುಹಬ್ಬ ಅಂಗವಾಗಿ ಬೆಟ್ಟದಪುರ ವಲಯ ಯೋಜನಾಧಿಕಾರಿ ಸಂತೋಷ್ ಕುಮಾರ್ ಜೈನ್ ಮಾರ್ಗದರ್ಶನದಲ್ಲಿ ಸಂಸ್ಥೆಯಿಂದ ಮಾಸಾಶನ ಪಡೆಯುತ್ತಿರುವ ಫಲಾನುಭವಿಗಳ ಮನೆಗೆ ಭೇಟಿ ನೀಡಿ ಹಣ್ಣು, ಹಂಪಲು ವಿತರಿಸಲಾಯಿತು.
Published on
ಬೆಟ್ಟದಪುರ: ಡಾ.ವೀರೇಂದ್ರ ಹೆಗ್ಗಡೆ ಅವರ ಪತ್ನಿ ಹೇಮಾವತಿ ಅವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಮಾಜಿಕ ಕಾರ್ಯಕ್ರಮ ವಿಶ್ವಕ್ಕೆ ಮಾದರಿಯಾಗಿದೆ ಎಂದು ಬೆಕ್ಕರೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಮಾಲತಿ ಪಂಡಿತಾರಾಧ್ಯ ಮೆಚ್ಚುಗೆ ವ್ಯಕ್ತಪಡಿಸಿದರು.
ಹೇಮಾವತಿ ಅವರ ಹುಟ್ಟುಹಬ್ಬ ಅಂಗವಾಗಿ ಬೆಟ್ಟದಪುರ ಯೋಜನಾ ಕಚೇರಿಯ ಬೆಕ್ಕರೆ ಗ್ರಾಮದಲ್ಲಿ ಸಂಸ್ಥೆಯ ಬೆಟ್ಟದಪುರ ವಲಯ ಯೋಜನಾಧಿಕಾರಿಗಳಾದ ಸಂತೋಷ್ ಕುಮಾರ್ ಜೈನ್ ಅವರ ಮಾರ್ಗದರ್ಶನದಲ್ಲಿ ಸಂಸ್ಥೆ ವತಿಯಿಂದ ಇತ್ತೀಚೆಗೆ ಮಾಸಾಶನ ಪಡೆಯುತ್ತಿರುವ ಫಲಾನುಭವಿಗಳ ಮನೆಗೆ ಭೇಟಿ ನೀಡಿ ಹಣ್ಣು ಹಂಪಲು ವಿತರಿಸಿ ಮಾತನಾಡಿದರು.
ಸಮಾಜದ ಅಭಿವೃದ್ಧಿಗಾಗಿ ಸರ್ಕಾರದ ಜತೆ ಸರ್ಕಾರೇತರ ಸಂಸ್ಥೆಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಹಾಗೂ ಹೇಮಾವತಿ ಅವರ ಮಾರ್ಗದರ್ಶನದಲ್ಲಿ ಶ್ರಮಿಸುತ್ತಿರುವುದು ಸಂತಸದ ವಿಷಯವಾಗಿದೆ. ಮಹಿಳಾ ಸಬಲೀಕರಣ ಜತೆಗೆ ಸಮುದಾಯದ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿ ಮಾಡಿ ಸಮಾಜದ ಅಭಿವೃದ್ಧಿಗೆ ಸಹಕಾರ ನೀಡುತ್ತಿದ್ದು, ಫಲಾನುಭವಿಗಳು ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸಂಸ್ಥೆಗೆ ಹೆಸರು ತರುವಂತೆ ಕೋರಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ವಲಯ ಮೇಲ್ವಿಚಾರಕಿ ಸುನೀತಾ, ಸಿಬ್ಬಂದಿ ಜ್ಯೋತಿ ಮತ್ತು ಒಕ್ಕೂಟದ ಸದಸ್ಯರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net