ಅವರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸಿ, ಪಾರ್ಕ್ ಪ್ರವೇಶ ದ್ವಾರದಲ್ಲಿ ಒಟ್ಟಾಗಿ ರಿಬ್ಬನ್ ಕತ್ತರಿಸುವ ಮೂಲಕ ಹೊಸ ವ್ಯವಸ್ಥೆಗೆ ಚಾಲನೆ ನೀಡಲಾಯಿತು. 60 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು ಫೋಟೋ ಗುರುತಿನ ಚೀಟಿಯನ್ನು ಟಿಕೆಟ್ ಕೌಂಟರ್‌ನಲ್ಲಿ ತೋರಿಸಿದರೆ ಈ ರಿಯಾಯಿತಿ ಸೌಲಭ್ಯ ಪಡೆಯಬಹುದು. ಪ್ರತಿ ಬೇಸಿಗೆಯಲ್ಲೂ ಮಕ್ಕಳು ಮೈಸೂರಿನಲ್ಲಿರುವ ತಮ್ಮ ಅಜ್ಜ-ಅಜ್ಜಿಯರ ಮನೆಗಳಿಗೆ ಬರುತ್ತಾರೆ. ಇತ್ತೀಚೆಗೆ ಇಂತಹ ಕುಟುಂಬಗಳು ಒಟ್ಟಾಗಿ ಜಿಆರ್‌ಎಸ್‌ಗೆ ಭೇಟಿ ನೀಡುತ್ತಿರುವುದು ಹೆಚ್ಚಾಗಿದೆ ಎಂದು ಜಿಆರ್‌ಎಸ್ ಫ್ಯಾಂಟಸಿ ಪಾರ್ಕ್‌ನ ಕಾರ್ಯಾಚರಣೆ ಮುಖ್ಯಸ್ಥ ಬಾಲಕೃಷ್ಣ ಕಿಣಿ ಹೇಳಿದರು.