ಅಂಗಡಿ-ಮುಂಗಟ್ಟುಗಳು, ಹೋಟೆಲ್‌ಗಳು, ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಹಾಗೂ ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಸಾರ್ವಜನಿಕ ಸಾರಿಗೆ ಸೇರಿದಂತೆ ವಾಹನ ಸಂಚಾರವೂ ಸಹಜವಾಗಿತ್ತು. ನಗರದ ಪ್ರಮುಖ ರಸ್ತೆ, ವೃತ್ತಗಳು, ಮಾರುಕಟ್ಟೆ ಪ್ರದೇಶಗಳು ಹಾಗೂ ಜನನಿಬಿಡ ಸ್ಥಳಗಳಲ್ಲಿ ಬೆಳಗ್ಗೆಯಿಂದಲೇ ಜನಸಂಚಾರ ಮತ್ತು ವಾಹನಗಳ ಓಡಾಟ ಸಾಮಾನ್ಯವಾಗಿತ್ತು. ವ್ಯಾಪಾರ-ವಹಿವಾಟು ಕೂಡ ಎಂದಿನಂತೆ ನಡೆಯಿತು. ಹೀಗಾಗಿ ಬಂದ್‌ಗೆ ಕರೆ ನೀಡಿದ್ದರೂ ನಗರದಲ್ಲಿ ಅದು ಸಂಪೂರ್ಣ ಬಂದ್ ರೂಪ ಪಡೆಯದೆ, ವಿವಿಧ ಕನ್ನಡಪರ ಸಂಘಟನೆಗಳ ಪ್ರತಿಭಟನೆ ಹಾಗೂ ರಸ್ತೆ ತಡೆಗೆ ಸೀಮಿತವಾಯಿತು.