ಚಪ್ಪರದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಗ್ರಾಮ ಪಂಚಾಯಿತಿ ವಾಟರ್ ಮನ್ ಡಂಕಣಾಚಾರಿ ಅವರು ಸಮವಸ್ತ್ರ ವಿತರಿಸಿದರು. ಬಿಲ್ ಕಲೆಕ್ಟರ್ ರಮಣಯ್ಯ, ಅಂಗನವಾಡಿ ಕಾರ್ಯಕರ್ತೆಯರಾದ ಆಶಾ, ರತ್ನಾ, ಸಹಾಯಕಿಯರಾದ ರಾಧಾ, ಗೌರಮ್ಮ ಹಾಗೂ ಸಿಬ್ಬಂದಿ ಇದ್ದರು.
Published on:
Copied
Follow Us
ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಚಪ್ಪರದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಗ್ರಾಮ ಪಂಚಾಯಿತಿ ವಾಟರ್‌ಮನ್ ಡಂಕಣಾಚಾರಿ ಅವರು ಉಚಿತವಾಗಿ ಸಮವಸ್ತ್ರಗಳನ್ನು ಬುಧವಾರ ವಿತರಿಸಿದರು.
ಈ ವೇಳೆ ಮಾತನಾಡಿದ ಪಿಡಿಒ ಶ್ರೀದೇವಿ, ಮಕ್ಕಳಿಗೆ ಅಗತ್ಯವಿರುವ ವಸ್ತುಗಳನ್ನು ದಾನಿಗಳ ನೆರವಿನಿಂದ ಒದಗಿಸುವುದು ಉತ್ತಮ ಸೇವೆಯಾಗಿದೆ ಎಂದರು.
ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಿಸುವ ಮೂಲಕ ಡಂಕಣಾಚಾರಿ ಅವರು ಸಮಾಜಮುಖಿ ಸೇವಾ ಕಾರ್ಯ ಮಾಡಿದ್ದಾರೆ. ಇಂಥವರು ಇತರರಿಗೂ ಪ್ರೇರಣೆಯಾಗಲಿ ಎಂದು ಹೇಳಿದರು.
ಬಿಲ್ ಕಲೆಕ್ಟರ್ ರಮಣಯ್ಯ, ಅಂಗನವಾಡಿ ಕಾರ್ಯಕರ್ತೆಯರಾದ ಆಶಾ, ರತ್ನಾ, ಸಹಾಯಕಿಯರಾದ ರಾಧಾ, ಗೌರಮ್ಮ ಹಾಗೂ ಸಿಬ್ಬಂದಿ ಇದ್ದರು.