ಮೈಸೂರು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಬುಧವಾರ ಕ್ರೀಡಾಪಟು ಬಿ.ಚೈತ್ರಾ ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ವಿಷ್ಣುವರ್ಧನ್, ಎಎಸ್‌ಪಿಗಳಾದ ಎನ್.ನಾಗೇಶ್, ಸಿ.ಮಲ್ಲಿಕ್, ಡಿವೈಎಸ್‌ಪಿಗಳಾದ ರಾಜಣ್ಣ, ಎಚ್.ಪಿ.ವೀರಣ್ಣ ಇತರರಿದ್ದರು
ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವವರು ಸೇರಿ ಪ್ರತಿಯೊಬ್ಬರು ದೈಹಿಕ ಸಾಮರ್ಥ್ಯ ಕಾಪಾಡಿಕೊಳ್ಳಬೇಕು
ಜ್ಯೋತಿನಗರದ ಡಿಎಆರ್ ಕವಾಯತು ಮೈದಾನದಲ್ಲಿ ಮೂರು ದಿನಗಳ ಕಾಲ ಆಯೋಜಿಸಿರುವ ಮೈಸೂರು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಬುಧವಾರ ಚಾಲನೆ ದೊರೆಯಿತು
ಮೈಸೂರು ಗ್ರಾಮಾಂತರ ಉಪ ವಿಭಾಗ, ನಂಜಗೂಡು ಉಪವಿಭಾಗ, ಹುಣಸೂರು ಉಪವಿಭಾಗ, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಜಿಲ್ಲಾ ವಿಶೇಷ ವಿಭಾಗ ತಂಡಗಳು ಪಥಸಂಚಲನದಲ್ಲಿ ಭಾಗಿಯಾಗಿದ್ದವು.
ಮೈಸೂರು: ಜ್ಯೋತಿನಗರದ ಡಿಎಆರ್ ಕವಾಯತು ಮೈದಾನದಲ್ಲಿ ಮೂರು ದಿನಗಳ ಕಾಲ ಆಯೋಜಿಸಿರುವ ಮೈಸೂರು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಬುಧವಾರ ಚಾಲನೆ ದೊರೆಯಿತು.
ಖೋ ಖೋ ಕ್ರೀಡಾಪಟು ಬಿ.ಚೈತ್ರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವವರು ಸೇರಿ ಪ್ರತಿಯೊಬ್ಬರು ದೈಹಿಕ ಸಾಮರ್ಥ್ಯ ಕಾಪಾಡಿಕೊಳ್ಳಬೇಕು. ಕ್ರೀಡೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ. ವ್ಯಕ್ತಿತ್ವದ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಶಿಸ್ತು, ನಾಯಕತ್ವ ಗುಣವನ್ನು ಬೆಳೆಸುತ್ತದೆ. ಜೀವನದ ಒತ್ತಡವನ್ನು ಕಡಿಮೆ ಮಾಡುವುದಲ್ಲದೆ, ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ ಮತ್ತು ಮನಸ್ಸಿಗೆ ಶಾಂತಿಯನ್ನು ನೀಡುತ್ತದೆ ಎಂದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ವಿಷ್ಣುವರ್ಧನ್, ಎಎಸ್‌ಪಿಗಳಾದ ಎನ್.ನಾಗೇಶ್, ಸಿ.ಮಲ್ಲಿಕ್, ಡಿವೈಎಸ್‌ಪಿಗಳಾದ ರಾಜಣ್ಣ, ಎಚ್.ಪಿ.ವೀರಣ್ಣ ಇತರರಿದ್ದರು.
ವಿವಿಧ ತಂಡಗಳ ಪಥಸಂಚಲನ ಗಮನ ಸೆಳೆಯಿತು. ಮೈಸೂರು ಗ್ರಾಮಾಂತರ ಉಪ ವಿಭಾಗ, ನಂಜಗೂಡು ಉಪವಿಭಾಗ, ಹುಣಸೂರು ಉಪವಿಭಾಗ, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಜಿಲ್ಲಾ ವಿಶೇಷ ವಿಭಾಗ ತಂಡಗಳು ಪಥಸಂಚಲನದಲ್ಲಿ ಭಾಗಿಯಾಗಿದ್ದವು. ಕ್ರೀಡಾಕೂಟವು ನ.14ರವರೆಗೆ ನಡೆಯಲಿದೆ.