ಕಚೇರಿಗೆ ತಡವಾಗಿ ಬಂದ ಸಿಬ್ಬಂದಿಯನ್ನು ಪ್ರಶ್ನಿಸಿದ ಅವರು, ಕಚೇರಿಗೆ ಸಿಬ್ಬಂದಿ ತಡವಾಗಿ ಬರುವ ಹಾಗೂ ಕಚೇರಿಯಲ್ಲಿ ಇಲ್ಲದಿರುವ ಬಗ್ಗೆ ದೂರು ಬಂದಿವೆ. ಈ ಸಮಸ್ಯೆ ಬಗೆಹರಿಸಬೇಕು. ಜನರಿಗೆ ಎಲ್ಲ ರೀತಿಯ ಸೌಲಭ್ಯ ಒದಗಿಸಲು ಅಧಿಕಾರಿಗಳು ಜವಾಬ್ದಾರಿ ವಹಿಸಿ ಕ್ರಮ ಕೈಗೊಳ್ಳಬೇಕು ಎಂದು ತಹಸೀಲ್ದಾರ್ ಮಹೇಶ್‌ಕುಮಾರ್ ಅವರಿಗೆ ಸೂಚಿಸಿದರು.