ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ವಸತಿ ನಿಲಯ ಕಾರ್ಮಿಕರ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ವಸತಿ ನಿಲಯಗಳ ಕಾರ್ಮಿಕರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಎನ್.ಮುದ್ದುಕೃಷ್ಣ, ಬಿ.ರಾಜೇಶ್ ಇತರರಿದ್ದರು.
ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ವಸತಿ ನಿಲಯಗಳ ಕಾರ್ಮಿಕರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಎನ್.ಮುದ್ದುಕೃಷ್ಣ, ಬಿ.ರಾಜೇಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿ ಮಾಡಿ
  • ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ
ಮೈಸೂರು: ವಿವಿಧ ಇಲಾಖೆಯ ವಸತಿ ನಿಲಯಗಳ ಕಾರ್ಮಿಕರಿಗೆ ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಎಐಯುಟಿಯುಸಿ ಸಂಯೋಜಿತ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದಿಂದ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಯಿತು.
ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವ್ಯಾಪ್ತಿಯ ವಸತಿ ನಿಲಯಗಳು, ಆಶ್ರಮ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಈವರೆಗೂ ಕನಿಷ್ಠ ವೇತನ ನೀಡುತ್ತಿಲ್ಲ. 
ಕಳೆದ 4-5 ತಿಂಗಳಿಂದ ಕಾರ್ಮಿಕರಿಗೆ ವೇತನ ಪಾವತಿಸಿಲ್ಲ. ಇದರಿಂದ ಅವರ ಕುಟುಂಬದ ಜೀವನೋಪಾಯ ತೀವ್ರ ಸಂಕಷ್ಟಕ್ಕೆ ಸಿಲುಕಿದೆ ಎಂದು ಪ್ರತಿಭಟನಾಕಾರರು ಅಳಲು ತೋಡಿಕೊಂಡರು.
ಎಸ್‌ಸಿ ಕಲ್ಯಾಣ ಇಲಾಖೆಯಲ್ಲಿ ವರ್ಷದಿಂದ ಕಾರ್ಮಿಕರ ಭವಿಷ್ಯ ನಿಧಿಗೆ(ಪಿಎಫ್) ಹಣ ಜಮೆ ಮಾಡಿಲ್ಲ. ಕಾರ್ಮಿಕರ ಕಾನೂನುಬದ್ಧ ಹಕ್ಕು ಉಲ್ಲಂಘಿಸಲಾಗಿದೆ. 
ಗಳಿಕೆ ರಜೆ, ಸಾಂದರ್ಭಿಕ ರಜೆ, ರಾಷ್ಟ್ರೀಯ ಹಬ್ಬಗಳ ರಜೆ, ವಾರದ ರಜೆ ಸೇರಿದಂತೆ ವಿವಿಧ ಸೌಲಭ್ಯಗಳನ್ನೂ ನೀಡುತ್ತಿಲ್ಲ. ಉಪಧನ ಕಾಯ್ದೆಯನ್ನೂ ಜಾರಿ ಮಾಡಿಲ್ಲ. ಏಕಾಏಕಿ ಕೆಲಸದಿಂದ ತೆಗೆದುಹಾಕಿ ಹೊಸ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ದೂರಿದರು. 

ಬೇಡಿಕೆ ಏನು:

ಕನಿಷ್ಠ ವೇತನ ಜಾರಿ, ಬಾಕಿ ಇರುವ ವೇತನ ಬಿಡುಗಡೆ, ಪಿಎಫ್ ಹಣ ಜಮಾ ಮಾಡಿಸಿ, ಮುಂದಿನ ದಿನಗಳಲ್ಲಿ ನಿಯಮಿತವಾಗಿ ಪಾವತಿಯಾಗುವಂತೆ ಕ್ರಮ ವಹಿಸಬೇಕು. 
ವಿವಿಧ ರಜೆ ಸೇರಿದಂತೆ ಕಾನೂನುಬದ್ಧ ಕಾರ್ಮಿಕ ಸೌಲಭ್ಯ ಕಲ್ಪಿಸಬೇಕು. ಕ್ಷುಲ್ಲಕ ಕಾರಣ ನೀಡಿ ಕೆಲಸದಿಂದ ತೆಗೆದ ಕಾರ್ಮಿಕರನ್ನು ಮರು ನೇಮಕ ಮಾಡಿಕೊಳ್ಳಬೇಕು. ವಿವಿಧ ಸಮಸ್ಯೆ ಬಗೆಹರಿಸಲು ಜಿಪಂ ಸಿಇಒ ಅಧ್ಯಕ್ಷತೆಯಲ್ಲಿ ಸಭೆ ಕರೆಯಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಜಿಪಂ ಸಿಇಒಗೆ ಮನವಿ ಸಲ್ಲಿಸಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಎನ್.ಮುದ್ದುಕೃಷ್ಣ, ಜಿಲ್ಲಾ ಕಾರ್ಯದರ್ಶಿ ಬಿ.ರಾಜೇಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net