ಬೆಟ್ಟದಪುರ ಪೊಲೀಸ್ ಠಾಣೆಗೆ ಡಾ.ನಾಗಲಕ್ಷ್ಮೀ ಚೌಧರಿ ಭೇಟಿ

ಬೆಟ್ಟದಪುರದ ಪೊಲೀಸ್ ಠಾಣೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ ಮಾಹಿತಿ ಪಡೆದರು.
ಬೆಟ್ಟದಪುರದ ಪೊಲೀಸ್ ಠಾಣೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ ಮಾಹಿತಿ ಪಡೆದರು.
Published on
ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಪೊಲೀಸ್ ಠಾಣೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಗುರುವಾರ ಭೇಟಿ ನೀಡಿದರು.
ಠಾಣೆಯ ವಿವಿಧ ದಾಖಲಾತಿಯ ನೋಂದಣಿ ಪುಸ್ತಕಗಳನ್ನು ಪರಿಶೀಲನೆ ನಡೆಸಿ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಮಾಹಿತಿ ಪಡೆದರು. ಈ ವೇಳೆ ಗ್ರಾಮದ ವಿವಿಧ ಮುಖಂಡರು, ಮಹಿಳಾ ಸದಸ್ಯರು ಸನ್ಮಾನಿಸಿ ಗೌರವಿಸಿದರು.
ದಿಢೀರ್ ಭೇಟಿ ನೀಡಿದ ಮಹಿಳಾ ಆಯೋಗದ ಅಧ್ಯಕ್ಷರಿಗೆ ಸಾರ್ವಜನಿಕರು ಅಹವಾಲು ಸಲ್ಲಿಸಿದರು. ಈ ವೇಳೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು.
ಹುಣಸೂರು ಡಿವೈಎಸ್ಪಿ ರವಿ, ತಾಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ, ಪಿಎಸ್‌ಐ ಅಜಯ್ ಕುಮಾರ್, ಸಿಡಿಪಿಒ ವೀಣಾ, ಎಎಸ್‌ಐ ಗೋಪಾಲ್, ಜಗದೀಶ್, ಮುಖಂಡರಾದ ಸರಸ್ಪತಿ, ಅನಿತಾ ತೊಟ್ಟಪ್ಪಶೆಟ್ಟಿ, ಪ್ರೀತಿ ಅರಸ್, ಪುಟ್ಟರಾಜು, ರವಿಕುಮಾರ್, ನೇರಳಕುಪ್ಪೆ ನವೀನ್ ಸೇರಿದಂತೆ ಪೊಲೀಸ್ ಸಿಬ್ಬಂದಿ, ಗ್ರಾಮಸ್ಥರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net