ಎಲ್ಲ ಶಾಸಕರ ಬೆಂಬಲ ನಮ್ಮ ತಂದೆಗೆ ಇದೆ. ಸಿದ್ದರಾಮಯ್ಯ ಅವರು ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ
ಯಾರನ್ನು ಮುಖ್ಯಮಂತ್ರಿ ಮಾಡಬೇಕು, ಯಾರನ್ನು ಮಾಡಬಾರದು ಎಂಬುದು ನಮ್ಮ ಪಕ್ಷದ ಆಂತರಿಕ ವಿಚಾರ
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುಲು ಯಾವ ಕಾರಣಗಳು ಇಲ್ಲ
ಮೈಸೂರು: ಮುಖ್ಯಮಂತ್ರಿ ಬದಲಾವಣೆ ಸಂಬಂಧ ಚುಂಚನಗಿರಿ ಶ್ರೀಗಳ ಹೇಳಿಕೆಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರನ್ನು ಮುಖ್ಯಮಂತ್ರಿ ಮಾಡಬೇಕು, ಯಾರನ್ನು ಮಾಡಬಾರದು ಎಂಬುದು ನಮ್ಮ ಪಕ್ಷದ ಆಂತರಿಕ ವಿಚಾರ. ಅದು ನಮ್ಮ ಶಾಸಕರಿಗೆ ಮತ್ತು ನಮ್ಮ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಇದರ ಬಗ್ಗೆ ಬೇರೆಯವರ ಅಭಿಪ್ರಾಯ ಅನಗತ್ಯ ಎಂದು ಹೇಳಿದರು.
ನಮ್ಮ ತಂದೆ ಪೂರ್ಣಾವಧಿಗೆ ಸಿಎಂ
ಎಲ್ಲ ಶಾಸಕರ ಬೆಂಬಲ ನಮ್ಮ ತಂದೆಗೆ ಇದೆ. ಸಿದ್ದರಾಮಯ್ಯ ಅವರು ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುಲು ಯಾವ ಕಾರಣಗಳು ಇಲ್ಲ. ಸಿದ್ದರಾಮಯ್ಯ ಅವರ ಮೇಲೆ ಯಾವ ಆರೋಪವೂ ಇಲ್ಲ. ಯಾವುದೇ ಹಗರಣವನ್ನು ಮಾಡಿಲ್ಲ. ಇಂತಹ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯೇ ಬರಬಾರದಿತ್ತು. ಆದರೂ ಯಾರೋ ಕೆಲವರು ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಹೈ ಕಮಾಂಡ್ ಎಲ್ಲೂ ಕೂಡ ಬದಲಾವಣೆ ಮಾಡುತ್ತೇವೆ ಎಂದು ಹೇಳಿಲ್ಲ. ಈ ಬಗ್ಗೆ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.
ನನಗೆ ವಿಶ್ವಾಸ ಇದೆ. ಇನ್ನೂ ಎರಡುವರೆ ವರ್ಷ ನಮ್ಮ ತಂದೆಯೇ ಮುಖ್ಯಮಂತ್ರಿಯಾಗಿರುತ್ತಾರೆ. ನನಗೆ ಇರುವ ಮಾಹಿತಿ ಪ್ರಕಾರ ಅಧಿಕಾರ ಹಂಚಿಕೆಯ ಸೂತ್ರವೇ ರಚನೆಯಾಗಿಲ್ಲ. ನಮ್ಮ ತಂದೆಯವರಾಗಲಿ, ಕೆಲ ಹಿರಿಯ ಸಚಿವರಾಗಲಿ ಈ ಬಗ್ಗೆ ಯಾವತ್ತು ಮಾತನಾಡಿಲ್ಲ. ಅಲ್ಲಿಗೆ ಅಧಿಕಾರ ಹಂಚಿಕೆ ಮಾತುಕತೆ ನಡೆದಿಲ್ಲ ಎಂದು ಅರ್ಥ ತಾನೇ. ಯಾರಿಗೆ ಎಷ್ಟು ಶಾಸಕರ ಬೆಂಬಲ ಇದೆ ಎನ್ನುವ ಚರ್ಚೆ ಮಾಡುವುದು ಬೇಡ. ಅದು ನಮ್ಮ ಪಕ್ಷದ ಆತಂರಿಕ ವಿಚಾರ. ಮತ್ತೆ ಮತ್ತೆ ಆ ಅಂಕಿ ಸಂಖ್ಯೆ ಕೇಳಬೇಡಿ. ಎಲ್ಲ ಶಾಸಕರ ಬೆಂಬಲ ನಮ್ಮ ತಂದೆಗೆ ಇದೆ.