ಕರ್ನಾಟಕ ರಕ್ಷಣಾ ವೇದಿಕೆಯ ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಘಟಕದ ಪ್ರಧಾನ ಕೇಂದ್ರ ಕಚೇರಿ ಉದ್ಘಾಟನೆ

*ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಆರ್.ಮೋಹನ್ ನೇತೃತ್ವ *ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ರಾಜ್ಯ ಉಪಾಧ್ಯಕ್ಷರಾದ ಶಿವರಾಜೇಗೌಡ, ಮಂಜೇಶ್, ಡಾ.ಜಗದೀಶ್ ಗೌಡ ಭಾಗಿ
Dr. Yathindra Siddaramaiah inaugurated the headquarters of the Mysore and Chamarajanagar district units of the Karnataka Rakshana Vedike on Wednesday. R. Mohan, Praveen Kumar Shetty, Shivarajegowda, Manjesh, Dr. Jagadish Gowda, M.A. Manjunath, Riyaz Pasha, Prakash were present.
ಕರ್ನಾಟಕ ರಕ್ಷಣಾ ವೇದಿಕೆಯ ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಘಟಕದ ಪ್ರಧಾನ ಕೇಂದ್ರ ಕಚೇರಿಯನ್ನು ಬುಧವಾರ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು. ಆರ್.ಮೋಹನ್, ಪ್ರವೀಣ್ ಕುಮಾರ್ ಶೆಟ್ಟಿ, ಶಿವರಾಜೇಗೌಡ, ಮಂಜೇಶ್, ಡಾ.ಜಗದೀಶ್ ಗೌಡ, ಎಂ.ಎ.ಮಂಜುನಾಥ್, ರಿಯಾಜ್ ಪಾಷಾ, ಪ್ರಕಾಶ್ ಇದ್ದರು.
Published on: 

ಮೈಸೂರು: ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆ ಹಾಗೂ ನಾಡಿನ ಅಸ್ಮಿತೆಯನ್ನು ಉಳಿಸಿ ಬೆಳೆಸುವುದು ಸರ್ಕಾರದ ಜೊತೆಗೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ ಎಂದು ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಜೆ.ಪಿ.ನಗರದ ಕವಿತಾ ಬೇಕರಿ ಸರ್ಕಲ್‌ನ ‘ಡಿ’ ಬ್ಲಾಕ್‌ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಘಟಕದ ಪ್ರಧಾನ ಕೇಂದ್ರ ಕಚೇರಿಯನ್ನು ಬುಧವಾರ ಉದ್ಘಾಟಿಸಿ ಮಾನಾಡಿದರು.

ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಅಸ್ಮಿತೆಯ ಮೂಲ ಕನ್ನಡ ಭಾಷೆಯಲ್ಲಿದೆ. ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗಾಗಿ ಕನ್ನಡಪರ ಸಂಘಟನೆಗಳು ದಶಕಗಳಿಂದ ನಡೆಸಿಕೊಂಡು ಬರುತ್ತಿರುವ ಹೋರಾಟ ಹಾಗೂ ಸೇವಾ ಕಾರ್ಯಗಳು ಶ್ಲಾಘನೀಯ. ಕನ್ನಡದ ನೆಲ, ಭಾಷೆ ಹಾಗೂ ಸಂಸ್ಕೃತಿಯ ಸಂರಕ್ಷಣೆಗೆ ಶ್ರಮಿಸುತ್ತಿರುವ ಎಲ್ಲ ಕನ್ನಡಪರ ಸಂಘಟನೆಗಳ ಕಾರ್ಯವನ್ನು ಅಭಿನಂದಿಸುವುದಾಗಿ ತಿಳಿಸಿದರು.

ಇಂದಿನ ಸಂದರ್ಭದಲ್ಲಿ ಕನ್ನಡ ಭಾಷೆಯ ಉಳಿವಿಗಾಗಿ ವಿಶೇಷ ಕಾಳಜಿ ವಹಿಸುವ ಅಗತ್ಯವಿದೆ. ಉದ್ಯೋಗ, ವ್ಯಾಪಾರ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಕರ್ನಾಟಕಕ್ಕೆ ಬಂದು ನೆಲೆಸುವ ಅನ್ಯಭಾಷಿಕರು ಇಲ್ಲಿನ ಭಾಷೆ ಮತ್ತು ಸಂಸ್ಕೃತಿಯನ್ನು ಗೌರವಿಸಬೇಕು. ಕನ್ನಡವನ್ನು ಕಲಿತು, ತಮ್ಮ ದೈನಂದಿನ ವ್ಯವಹಾರಗಳಲ್ಲಿ ಕನ್ನಡ ಭಾಷೆಯ ಬಳಕೆಗೆ ಆದ್ಯತೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು. ನಮ್ಮ ನೆಲದ ಸಂಪನ್ಮೂಲಗಳನ್ನು ಬಳಸಿಕೊಂಡು ಬದುಕು ಕಟ್ಟಿಕೊಳ್ಳುವವರು ಇಲ್ಲಿನ ಭಾಷೆ ಮತ್ತು ಸಂಸ್ಕೃತಿಯನ್ನೂ ಗೌರವಿಸುವುದು ಅತ್ಯಗತ್ಯ ಎಂದರು.

ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಆರ್.ಮೋಹನ್ ಮಾತನಾಡಿದರು. ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಮಾಜಿ ಮೇಯರ್ ಪುರುಷೋತ್ತಮ್, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ರಾಜ್ಯ ಉಪಾಧ್ಯಕ್ಷರಾದ ಶಿವರಾಜೇಗೌಡ, ಮಂಜೇಶ್, ಡಾ.ಜಗದೀಶ್ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಪಾಷಾ, ಉಪಾಧ್ಯಕ್ಷರಾದ ಪ್ರಕಾಶ್, ಎಂ.ಎ.ಮಂಜುನಾಥ್, ಗೌರವಾಧ್ಯಕ್ಷ ದಾಸನೂರು ನಾಗೇಶ್, ಕಾರ್ಯಾಧ್ಯಕ್ಷ ಸಮೀ ಉಲ್ಲಾ ಶರೀಫ್, ವಕ್ತಾರ ವೆಂಕಟೇಶ್, ಸಂಚಾಲಕ ಡಿ.ಪಿ.ಜಯಕುಮಾರ್ ಇತರರಿದ್ದರು.