ಇದರ ಹಿಂದೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಗ್ರಾಮಾಂತರ ಬಸ್ ಡಿಕ್ಕಿ ಹೊಡೆದಿದೆ. ನಗರ ಸಾರಿಗೆ ಬಸ್ ಕೂಡ ಮುಂದಿನ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದ್ದು, ಮೂರು ಬಸ್‌ಗಳು ಜಖಂಡಗೊಂಡಿದ್ದು, ಮೂರು ಬಸ್‌ನ ಚಾಲಕರ ನಡುವೆ ವಾಗ್ವಾದ ನಡೆದಿದೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಸ್‌ಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.