ಮಾದಕ ವ್ಯಸನ ಸಮಾಜಕ್ಕೆ ಪಿಡುಗು

 ಬೆಟ್ಟದಪುರದ ಎಸ್‌ಎಂಎಸ್ ವಿದ್ಯಾಸಂಸ್ಥೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಟ್ಟದಪುರ ಪೊಲೀಸ್ ಠಾಣೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನವನ್ನು ಗಣ್ಯರು ಉದ್ಘಾಟಿಸಿದರು. ಮಂಜುನಾಥ್, ಬಿ.ವಿ.ಮಂಜುನಾಥ್, ಎ.ವಿ.ಛಾಯಾ, ಶೇಖರಗೌಡ ಇದ್ದರು.
ಬೆಟ್ಟದಪುರದ ಎಸ್‌ಎಂಎಸ್ ವಿದ್ಯಾಸಂಸ್ಥೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಟ್ಟದಪುರ ಪೊಲೀಸ್ ಠಾಣೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನವನ್ನು ಗಣ್ಯರು ಉದ್ಘಾಟಿಸಿದರು. ಮಂಜುನಾಥ್, ಬಿ.ವಿ.ಮಂಜುನಾಥ್, ಎ.ವಿ.ಛಾಯಾ, ಶೇಖರಗೌಡ ಇದ್ದರು.
Published on
ಬೆಟ್ಟದಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಟ್ಟದಪುರ ಪೊಲೀಸ್ ಠಾಣೆ ಹಾಗೂ ಎಸ್‌ಎಂಎಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದಲ್ಲಿ ಮಂಗಳವಾರ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನ ಹಮ್ಮಿಕೊಳ್ಳಲಾಗಿತ್ತು.
ಬೆಟ್ಟದಪುರ ಪೊಲೀಸ್ ಠಾಣೆ ಎಎಸ್‌ಐ ಮಂಜುನಾಥ್ ಮಾತನಾಡಿ, ಮಾದಕ ವಸ್ತುಗಳ ವ್ಯಸನವು ಸಮಾಜದ ದೊಡ್ಡ ಪಿಡುಗಾಗಿದೆ. ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರ ಸಹಕಾರ ದೊರೆತರೆ ಮಾತ್ರ ಈ ಪಿಡುಗನ್ನು ಪರಿಣಾಮಕಾರಿಯಾಗಿ ನಿರ್ಮೂಲನೆ ಮಾಡಲು ಸಾಧ್ಯ ಎಂದು ಹೇಳಿದರು.
ವಿದ್ಯಾಸಂಸ್ಥೆಯ ಕಾರ್ಯಾಧ್ಯಕ್ಷ ಬಿ.ವಿ.ಮಂಜುನಾಥ್ ಮಾತನಾಡಿ, ಮಾದಕ ವಸ್ತುಗಳ ವ್ಯಸನ ದೇಶದ ಯುವ ಶಕ್ತಿಯನ್ನು ಕುಂಠಿತಗೊಳಿಸುತ್ತಿದೆ. ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಶಿಕ್ಷಣ ಸಂಸ್ಥೆಗಳ ಪ್ರಮುಖ ಜವಾಬ್ದಾರಿಯಾಗಿದೆ. ಇಂತಹ ಕಾರ್ಯಕ್ರಮಗಳು ಯುವಜನತೆಯನ್ನು ಉತ್ತಮ ದಾರಿಯತ್ತ ಕೊಂಡೊಯ್ಯುತ್ತವೆ ಎಂದರು.
ಆನ್‌ಲೈನ್ ನೇರ ಪ್ರಸಾರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಹೇಮಾವತಿ, ಬೆಂಗಳೂರು ಎಸ್‌ಪಿ ಡಾ.ವೆಂಕಟೇಶ್ ಪ್ರಸನ್ನ ಅವರು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಸಂದೇಶ ನೀಡಿದರು.
ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎ.ವಿ.ಛಾಯಾ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಶೇಖರಗೌಡ, ಪದಾಧಿಕಾರಿ ಸುನೀತಾ ಶೆಟ್ಟಿ, ರೂಪಾ, ಜನ ಜಾಗೃತಿ ವೇದಿಕೆ ಕೊಡಗು ಜಿಲ್ಲಾ ಉಪಾಧ್ಯಕ್ಷ ಬಿ.ಜೆ. ದೇವರಾಜ್, ಪ್ರಾಂಶುಪಾಲ ಎಸ್.ಕೆ.ರಾಜ್, ಮುಖ್ಯಶಿಕ್ಷಕರಾದ ವೆಂಕಟೇಶ್, ಕುಮಾರ್, ಕಾರ್ಯಕ್ರಮಾಧಿಕಾರಿ ಯಶವಂತ ಕುಮಾರ್, ಸಹ ಕಾರ್ಯಕ್ರಮಾಧಿಕಾರಿಗಳಾದ ಕುಬೇರ್, ಸತೀಶ್, ಉಪನ್ಯಾಸಕರಾದ ಶಿವಕುಮಾರ್, ವಸಂತ್, ಸುನೀಲ್, ಬಸವರಾಜು, ಹರ್ಷಿತ, ಪ್ರತಾಪ್, ಅಕ್ಷತಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net