ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ ಆಹಾರ ಸೇವಿಸಿ

ಬೆಟ್ಟದಪುರ ಸಮೀಪದ ಕಣಗಾಲು ಗ್ರಾಮದ ಒಂದನೇ ಅಂಗನವಾಡಿ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಪೌಷ್ಟಿಕ ಸಪ್ತಾಹ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಡಾ. ಸಿ.ಕಾರ್ತಿಕ್, ಶಶಿಧರ್, ರಾಧಾಮಣಿ, ಸವಿತಾ, ದಿವ್ಯಾರಾಣಿ, ಮಂಜುಳಾ, ಶೋಭಾ ಇತರರಿದ್ದರು.
ಬೆಟ್ಟದಪುರ ಸಮೀಪದ ಕಣಗಾಲು ಗ್ರಾಮದ ಒಂದನೇ ಅಂಗನವಾಡಿ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಪೌಷ್ಟಿಕ ಸಪ್ತಾಹ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಡಾ. ಸಿ.ಕಾರ್ತಿಕ್, ಶಶಿಧರ್, ರಾಧಾಮಣಿ, ಸವಿತಾ, ದಿವ್ಯಾರಾಣಿ, ಮಂಜುಳಾ, ಶೋಭಾ ಇತರರಿದ್ದರು.
Published on
ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಕಣಗಾಲು ಗ್ರಾಮದ ಒಂದನೇ ಅಂಗನವಾಡಿ ಕೇಂದ್ರದಲ್ಲಿ ಇತ್ತೀಚೆಗೆ ರಾಷ್ಟ್ರೀಯ ಪೌಷ್ಠಿಕ ಸಪ್ತಾಹ ಕಾರ್ಯಕ್ರಮವನ್ನು ಆಚರಿಸಲಾಯಿತು.
ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಿ.ಕಾರ್ತಿಕ್ ಮಾತನಾಡಿ, ಗರ್ಭಿಣಿಯರು ಹಾಗೂ ಬಾಣಂತಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದರ ಜತೆಗೆ ಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವುದು ಅತ್ಯಂತ ಅಗತ್ಯ. ತಾಯಿ ಆರೋಗ್ಯವಾಗಿದ್ದರೆ ಮಾತ್ರ ಮಗುವಿನ ಬೆಳವಣಿಗೆಯೂ ಉತ್ತಮವಾಗಿರುತ್ತದೆ. ಪ್ರತಿ ದಿನದ ಆಹಾರದಲ್ಲಿ ಸೊಪ್ಪು, ತರಕಾರಿ, ಹಣ್ಣು, ಬೇಳೆಕಾಳು ಸೇರಿದಂತೆ ವಿವಿಧ ಪೌಷ್ಟಿಕ ಆಹಾರಗಳನ್ನು ಬಳಸಬೇಕು. ಅಪೌಷ್ಟಿಕತೆ ತಡೆಗಟ್ಟಲು ಆರೋಗ್ಯ ಇಲಾಖೆ ಹಾಗೂ ಅಂಗನವಾಡಿ ಕೇಂದ್ರಗಳಿಂದ ನೀಡಲಾಗುವ ಸಲಹೆ-ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕ ಶಶಿಧರ್, ಆರೋಗ್ಯ ಸುರಕ್ಷಾಧಿಕಾರಿಗಳಾದ ರಾಧಾಮಣಿ, ಸವಿತಾ, ದಿವ್ಯಾರಾಣಿ, ಆಶಾ ಕಾರ್ಯಕರ್ತೆಯರಾದ ಮಂಜುಳಾ, ಶೋಭಾ, ಅಂಗನವಾಡಿ ಕಾರ್ಯಕರ್ತೆ ನೇತ್ರಾವತಿ, ಗರ್ಭಿಣಿಯರು ಹಾಗೂ ಬಾಣಂತಿಯರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net