ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ

ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ
ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ
Published on
ಮೈಸೂರು: ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದು ಮೈಸೂರಿನ ಬಸವಮಾರ್ಗ ವ್ಯಸನಮುಕ್ತ ಮತ್ತು ಪುನರ್ವಸತಿ ಕೇಂದ್ರದ ಸಂಸ್ಥಾಪಕ ಎಸ್.ಬಸವರಾಜು ಅಭಿಪ್ರಾಯಪಟ್ಟರು.
ಚಾಮರಾಜನಗರದ ಮರಿಯಾಲ ಗ್ರಾಮದಲ್ಲಿ ಇರುವ ಮರಿಯಾಲ ಮಠದ ಶ್ರೀ ಮುರುಘರಾಜೇಂದ್ರಸ್ವಾಮಿ ವಿದ್ಯಾಸಂಸ್ಥೆಯ 15ನೇ ವರ್ಷದ ಶಾಲಾ ವಾರ್ಷಿಕೋತ್ಸವ ಅಂಗವಾಗಿ ಶಾಲೆಯ ಆವರಣದಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣವು ಜ್ಞ್ಞಾನ, ಕೌಶಲ ಮತ್ತು ಬೌದ್ಧಿಕ ಬೆಳವಣಿಗೆಯನ್ನು ಒದಗಿಸುವ ಮೂಲಕ ವ್ಯಕ್ತಿಯ ಜೀವನವನ್ನು ರೂಪಿಸುವ ಅತ್ಯಂತ ಶಕ್ತಿಶಾಲಿ ಸಾಧನವಾಗಿದೆ. ಇದು ಆತ್ಮವಿಶ್ವಾಸ, ತಾರ್ಕಿಕ ಚಿಂತನೆ ಮತ್ತು ಉತ್ತಮ ನೈತಿಕ ಮೌಲ್ಯಗಳನ್ನು ಬೆಳೆಸುವುದರೊಂದಿಗೆ ಆರ್ಥಿಕ ಭದ್ರತೆ ಮತ್ತು ವೈಯಕ್ತಿಕ ಯಶಸ್ಸನ್ನು ಖಚಿತಪಡಿಸುತ್ತದೆ. ದೇಶದ ಭವಿಷ್ಯ ಶಿಕ್ಷಣದ ಮೇಲೆ ನಿಂತಿದೆ. ಈ ಕಾರಣದಿಂದ ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಸಲಹೆ ನೀಡಿದರು.
ಶಿಕ್ಷ ಪದವಿ ಪೂರ್ವ ಕಾಲೇಜಿನ ದೇವರಾಜ ಪಿ.ಚಿಕ್ಕಹಳ್ಳಿ ಮಾತನಾಡಿ, ಬಸವಾದಿ ಶರಣರು ಈ ನಾಡಿನಲ್ಲಿ ಜನ್ಮ ಪಡೆಯದಿದ್ದರೆ ಶಿಕ್ಷಣದ ಕಾಂತ್ರಿಯಾಗುತ್ತಿರಲಿಲ್ಲ. ಚಾತುರ್ವರ್ಣ ವ್ಯವಸ್ಥೆಯನ್ನು ಧಿಕ್ಕರಿಸಿ, ಲಿಂಗ, ಜಾತಿ, ಮತ್ತು ವರ್ಗ ತಾರತಮ್ಯವಿಲ್ಲದ ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದರು ಎಂದರು.
ಶ್ರೀ ಇಮ್ಮಡಿ ಮುರುಘ ರಾಜೇಂದ್ರ ಸ್ವಾಮೀಜಿ ಮಾತನಾಡಿದರು. ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ತೋಟೇಶ್, ನಿವೃತ ಸೈನಿಕ ಎಸ್.ಗಂಗಾಧರ್, ಸಿಆರ್‌ಪಿ ರೇಚಣ್ಣ, ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಬಿ.ಕೆ.ನಾಗರಾಜು ಬ್ಯಾತಹಳ್ಳಿ, ಪ್ರಥಮ ದರ್ಜೆ ಗುತ್ತಿಗೆದಾರ ನಟರಾಜು, ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಮುಖ್ಯ ಶಿಕ್ಷಕ ಮಂಜು ಇತರರು ಇದ್ದರು.
ವೇದಿಕೆ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net