ಮಾನವೀಯತೆ, ನೈತಿಕತೆ ಗಟ್ಟಿಗೊಳಿಸುವ ಶಿಕ್ಷಣ ಅಗತ್ಯ:ವಿಶ್ರಾಂತ ಕುಲಪತಿ ಪ್ರೊ.ಲಿಂಗರಾಜಗಾಂಧಿ ಅಭಿಮತ

ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ವಿಚಾರ ಸಂಕಿರಣವನ್ನು ಪ್ರೊ. ಲಿಂಗರಾಜಗಾಂಧಿ ಉದ್ಘಾಟಿಸಿದರು. ಪ್ರೊ. ಸಿ.ನಾಗಣ್ಣ, ಡಾ. ರೇಚಣ್ಣ, ಪಿ.ವಸುಮತಿ ಇತರರು ಇದ್ದರು.
ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ವಿಚಾರ ಸಂಕಿರಣವನ್ನು ಪ್ರೊ. ಲಿಂಗರಾಜಗಾಂಧಿ ಉದ್ಘಾಟಿಸಿದರು. ಪ್ರೊ. ಸಿ.ನಾಗಣ್ಣ, ಡಾ. ರೇಚಣ್ಣ, ಪಿ.ವಸುಮತಿ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರಸ್ತುತ ಸಂದರ್ಭದಲ್ಲಿ ಮಾನವೀಯತೆ, ನೈತಿಕತೆ ಕಡಿಮೆ ಅಗುತ್ತಿದ್ದು, ಅದನ್ನು ವಿಸ್ತರಿಸುವುದೇ ನಿಜವಾದ ಶಿಕ್ಷಣ
  • ಮನುಷ್ಯ ನಿರಂತರವಾಗಿ ಪ್ರಕೃತಿಯ ಮೇಲೆ ದೌರ್ಜನ್ಯ ಎಸಗಿದರೆ ಪ್ರಾಕೃತಿಕ ವಿಕೋಪಗಳ ಮೂಲಕ ಪಾಠ ಕಲಿಸುತ್ತದೆ
ಮೈಸೂರು:ಮಾನವೀಯತೆ, ನೈತಿಕತೆ ಮರೆಯಾಗುತ್ತಿರುವ ಇಂದಿನ ದಿನಗಳಲ್ಲಿ ಅದನ್ನು ಗಟ್ಟಿಗೊಳಿಸುವ ಶಿಕ್ಷಣ ನೀಡುವ ಅಗತ್ಯವಿದೆ ಎಂದು ಬೆಂಗಳೂರು ನಗರ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಲಿಂಗರಾಜಗಾಂಧಿ ಅಭಿಪ್ರಾಯಪಟ್ಟರು.
ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಆಯೋಜಿಸಿದ್ದ ಒಂದು ದಿನದ ರಾಜ್ಯಮಟ್ಟದ ವಿಚಾರಸಂಕಿರಣ ಉದ್ಘಾಟಿಸಿ ಮಾತನಾಡಿದರು.
ತಂತ್ರಜ್ಞಾನ ಯುಗದಲ್ಲಿ ನೈತಿಕ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರಸ್ತುತ ಸಂದರ್ಭದಲ್ಲಿ ಮಾನವೀಯತೆ, ನೈತಿಕತೆ ಕಡಿಮೆ ಅಗುತ್ತಿದ್ದು, ಅದನ್ನು ವಿಸ್ತರಿಸುವುದೇ ನಿಜವಾದ ಶಿಕ್ಷಣವಾಗಿದೆ ಎಂದರು.
ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಸಿ.ನಾಗಣ್ಣ ಮಾತನಾಡಿ, ತಂತ್ರಜ್ಞಾನವು ಮನುಷ್ಯನ ಮೇಲೆ ಪ್ರಾಬಲ್ಯ ಸಾಧಿಸಲು ಬಿಡದೆ, ಅದು ಮಾನವನ ಸೇವೆಗೆ ಪೂರಕವಾಗಿರುವಂತೆ ಪಳಗಿಸಬೇಕು ಎಂದು ಅಭಿಪ್ರಾಯಪಟ್ಟರು.
ದೇಶವು ಅತ್ಯಂತ ಶ್ರೀಮಂತ ನೈತಿಕ ಪರಂಪರೆಯನ್ನು ಹೊಂದಿದೆ. ಮೌಲ್ಯಗಳನ್ನು ಉಳಿಸಿಕೊಳ್ಳಲು ಪಾಶ್ಚಿಮಾತ್ಯ ಪ್ರಭಾವದಿಂದ ಹೊರಬರಬೇಕಾಗಿದೆ. ಮನುಷ್ಯ ನಿರಂತರವಾಗಿ ಪ್ರಕೃತಿಯ ಮೇಲೆ ದೌರ್ಜನ್ಯ ಎಸಗಿದರೆ ಪ್ರಾಕೃತಿಕ ವಿಕೋಪಗಳ ಮೂಲಕ ಪಾಠ ಕಲಿಸುತ್ತದೆ ಎಂದು ಎಚ್ಚರಿಸಿದರು.
ಲೇಖಕರು ಸಮಾಜದ ದಾರಿದೀಪಗಳಾಗಿದ್ದು, ಶ್ರೇಷ್ಠ ಸಾಹಿತಿಗಳ ಕೃತಿಗಳು ಸಾರ್ವತ್ರಿಕ ಪ್ರೀತಿ ಮತ್ತು ಸೌಹಾರ್ದತೆಯನ್ನು ಬೋಧಿಸುತ್ತವೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ರೇಚಣ್ಣ ಅಧ್ಯಕ್ಷತೆ ವಹಿಸಿದ್ದರು. ಆಂಗ್ಲ ವಿಭಾಗದ ಮುಖ್ಯಸ್ಥೆ ಪಿ.ವಸುಮತಿ ಇದ್ದರು.
ತುಮಕೂರು ವಿಶ್ವವಿದ್ಯಾಲಯದ ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಎಚ್.ಕೆ. ಶಿವಲಿಂಗಸ್ವಾಮಿ. ಮೈಸೂರು ಮಹಾರಾಜ ಕಾಲೇಜಿನ ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕ ಡಾ. ಪಿ.ವೆಂಕಟೇಶ್. ಹುಣಸೂರಿನ ಡಿ. ದೇವರಾಜ ಅರಸು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಎ. ಸೌಮ್ಯಾ ಉಪನ್ಯಾಸ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net