ಮಹನೀಯರ ಆದರ್ಶ ಮೈಗೂಡಿಸಿಕೊಳ್ಳಿ

ಪಿರಿಯಾಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಗಣ್ಯರು ಶಿವಯೋಗಿ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.  ಶಕೀಲ ಬಾನು,  ಹೊಸಳ್ಳಿ ಕೃಷ್ಣೆಗೌಡ, ಚಂದ್ರಶೇಖರ್, ಚಂದ್ರೇಗೌಡ, ಪ್ರಸಾದ್ ಇತರರು ಇದ್ದರು.
ಪಿರಿಯಾಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಗಣ್ಯರು ಶಿವಯೋಗಿ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಶಕೀಲ ಬಾನು, ಹೊಸಳ್ಳಿ ಕೃಷ್ಣೆಗೌಡ, ಚಂದ್ರಶೇಖರ್, ಚಂದ್ರೇಗೌಡ, ಪ್ರಸಾದ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹೊಸಳ್ಳಿ ಕೃಷ್ಣೆಗೌಡ ಸಲಹೆ
ಪಿರಿಯಾಪಟ್ಟಣ : ಶಿವಯೋಗಿ ಸಿದ್ದರಾಮೇಶ್ವರರು ತಮ್ಮ ಕಾಯಕ ನಿಷ್ಠೆಯ ಮೂಲಕ ಇತರರಿಗೆ ಮಾದರಿಯಾಗಿದ್ದರು ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹೊಸಳ್ಳಿ ಕೃಷ್ಣೆಗೌಡ ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಿವಯೋಗಿ ಸಿದ್ದರಾಮೇಶ್ವರರ ಆದರ್ಶ ಗುಣಗಳನ್ನು ಮೆಚ್ಚಿದ ಬಸವಣ್ಣನವರು ಇವರನ್ನು ಸಾಮಾಜಿಕ ಸುಧಾರಣೆ ಕಾರ್ಯಕ್ಕೆ ಬಳಸಿಕೊಂಡರು. ಮಹನೀಯರ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಸುಧಾರಣೆಯಾಗಲು ಸಾಧ್ಯ ಎಂದರು.
ಬೋವಿ ಸಮುದಾಯದ ಮುಖಂಡ ರವಿಕುಮಾರ್ ಮಾತನಾಡಿ, ಸಮುದಾಯವು ಇಂದು ಶಿವಯೋಗಿ ಸಿದ್ದರಾಮೇಶ್ವರ ಅವರ ತತ್ವಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಜಾಗೃತಿಯನ್ನು ಹೊಂದಬೇಕಾಗಿದೆ. ಸಮುದಾಯವು ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವುದರ ಮೂಲಕ ಸಮಾಜಮುಖಿಯಾಗಿ ಹೊರಹೊಮ್ಮಬೇಕಿದೆ. ಮಹನೀಯರ ಜಯಂತಿಗಳನ್ನು ಕೇವಲ ಒಂದೊಂದು ವರ್ಗಕ್ಕೆ ಸೀಮಿತಗೊಳಿಸದೆ ಪ್ರತಿಯೊಬ್ಬರೂ ಆಗಮಿಸಿ ಅವರ ತತ್ವ ಸಿದ್ಧಾಂತಗಳನ್ನು ಅರ್ಥೈಸಿಕೊಳ್ಳಲು ಪ್ರಯತ್ನಿಸಬೇಕು ಎಂದರು.
ಈ ಸಂದರ್ಭದಲ್ಲಿ ಶಿರಸ್ತೇದಾರ್ ಶಕೀಲ ಬಾನು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್, ರೇಷ್ಮೆ ಇಲಾಖೆ ಅಧಿಕಾರಿ ಚಂದ್ರೇಗೌಡ, ತೋಟಗಾರಿಕೆ ಇಲಾಖೆ ಅಧಿಕಾರಿ ಪ್ರಸಾದ್, ಶಿಕ್ಷಣ ಇಲಾಖೆ ನಂಜುಂಡಸ್ವಾಮಿ, ಮುಖಂಡರಾದ ಶಿವಕುಮಾರ್, ಮುರುಗೇಶ್, ಗಣೇಶ್, ಸಿಬ್ಬಂದಿ ಜಯಕುಮಾರ್, ಶೇಖರ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net