ಮೈಸೂರು: ಸಂಘಟನಾ ಸೃಜನ ಅಭಿಯಾನದ ಮೂಲಕ ಪಕ್ಷದಲ್ಲಿ ಅಧಿಕಾರದ ವಿಕೇಂದ್ರೀಕರಣಕ್ಕೆ ಒತ್ತು ನೀಡಲಾಗಿದ್ದು, ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತರು, ಮಹಿಳೆಯರು, ಯುವಕರು ಹಾಗೂ ಸಮರ್ಪಿತ ಕಾಂಗ್ರೆಸ್ ಕಾರ್ಯಕರ್ತರಿಗೆ ನಾಯಕತ್ವದ ಹೆಚ್ಚಿನ ಅವಕಾಶ ಕಲ್ಪಿಸಲಾಗುತ್ತದೆ ಎಂದು ಜಾರ್ಖಂಡ್ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ, ಎಐಸಿಸಿ ವೀಕ್ಷಕ ರಾಜೇಶ್ ಠಾಕೂರ್ ಹೇಳಿದರು.