ಶಾಲಾ ಮಕ್ಕಳೊಂದಿಗೆ ಬಿಸಿಯೂಟ ಸವಿದ

ನಂಜನಗೂಡು ತಾಲೂಕಿನ ಚಿನ್ನಂಬಳ್ಳಿ ಸರ್ಕಾರಿ ಶಾಲಾ ಮಕ್ಕಳ ಜತೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ ಸೋಮವಾರ ಬಿಸಿಯೂಟ ಸವಿದರು.
ನಂಜನಗೂಡು ತಾಲೂಕಿನ ಚಿನ್ನಂಬಳ್ಳಿ ಸರ್ಕಾರಿ ಶಾಲಾ ಮಕ್ಕಳ ಜತೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ ಸೋಮವಾರ ಬಿಸಿಯೂಟ ಸವಿದರು.
Published on
ನಂಜನಗೂಡು: ಚಿಲ್ಲಂಬಳ್ಳಿ ಸರ್ಕಾರಿ ಶಾಲೆ ಮಕ್ಕಳನ್ನು ರಜಾ ದಿನಗಳಲ್ಲಿ ಮೃಗಾಲಯಕ್ಕೆ ಕರೆತಂದು ಪ್ರಾಣಿಗಳ ಪರಿಚಯ ಮಾಡಿಕೊಡಲಾಗುವುದು ಎಂದು ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಹಾಡ್ಯ ರಂಗಸ್ವಾಮಿ ತಿಳಿಸಿದರು.
ತಾಲ್ಲೂಕಿನ ವರುಣ ವಿಧಾನ ಸಭಾ ಕ್ಷೇತ್ರದ ಚಿನ್ನಂಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೋಮವಾರ ಭೇಟಿ ನೀಡಿ ಶಾಲಾ ಮಕ್ಕಳೊಂದಿಗೆ ಸಮಯ ಕಳೆದು ಬಿಸಿಯೂಟ ಸವಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಚಿನ್ನಂಬಳ್ಳಿ ಶಾಲೆಯು ಕ್ಷೇತ್ರದಲ್ಲಿ ಮಾದರಿ ಶಾಲೆಯಾಗಿ ಮುನ್ನಡೆಯುತ್ತಿದೆ. ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಪಾಠ ಪ್ರವಚನಗಳಿಗೆ ಸ್ಪಂದಿಸುತ್ತಿದ್ದಾರೆ. ಪಾಲಕರು ಕೂಡ ಶಿಕ್ಷಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಚಿಲ್ಲಂಬಳ್ಳಿ ಸರ್ಕಾರಿ ಶಾಲೆಯ ಮಕ್ಕಳಿಗೆ ರಜಾ ದಿನಗಳಲ್ಲಿ ಮೃಗಾಲಯಕ್ಕೆ ಕರೆತಂದು ಪ್ರಾಣಿಗಳ ಪರಿಚಯ ಮಾಡಿಕೊಡಲಾಗುವುದು ಎಂದರು.
ಗ್ರಾಮದ ಮುಖಂಡ ಚಿನ್ನಂಬಳ್ಳಿ ಮಾದೇವ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕಾವ್ಯಾ ಶೇಷಾದ್ರಿ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಂಜು ಹಾಗೂ ಪಾಲಕರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net